ಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕವಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಸಿಆರ್‌ಪಿ ವೀರೇಶ ಕೌಟಿ ಉದ್ಘಾಟಿಸಿದರು. ಪ್ರಮುಖರಾದ ಭರಮಪ್ಪ, ತೋಟಪ್ಪ, ನೀಲಪ್ಪ, ಹನುಮಂತಪ್ಪ, ವೆಂಕರಡ್ಡಿ, ಮೋದಿನಸಾಬ, ನಿಂಗನಗೌಡ ಇತರರಿದ್ದರು. 
ಜಿಲ್ಲೆ

ಪ್ರತಿಭಾ ಕಾರಂಜಿಯಿಂದ ಕಲಿಕಾ ಮಟ್ಟ ಸುಧಾರಣೆ

ಅಳವಂಡಿ: ವಿದ್ಯಾರ್ಥಿಗಳ ಪ್ರತಿಭೆಯನ್ನು ನ್ಯಾಯಯುತವಾಗಿ ಗುರುತಿಸುವ ಕೆಲಸ ನಿರ್ಣಾಯಕರು ಮಾಡಲಿ ಎಂದು ಸಿಆರ್‌ಪಿ ವೀರೇಶ ಕೌಟಿ ಹೇಳಿದರು.

ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ

ಸಮೀಪದ ಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಜಂಟಿಯಾಗಿ ಹಮ್ಮಿಕೊಂಡಿದ್ದ ಕವಲೂರು ಕ್ಲಸ್ಟರ್ ಮಟ್ಟದ 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧಾ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ನಿರಂತರ ಓದಿನ ಜೊತೆಗೆ ಪ್ರತಿಭಾ ಕಾರಂಜಿ, ಕ್ರೀಡೆ, ಸಂಗೀತ ಮುಂತಾದ ಕಾರ್ಯಕ್ರಮಗಳಲ್ಲಿ ಕಲಿಕಾ ಮಟ್ಟ ಸುಧಾರಣೆಯಾಗಲಿದೆ. ಸೋಲು-ಗೆಲುವನ್ನು ಲೆಕ್ಕಿಸದೇ ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು.
ಪ್ರಮುಖರಾದ ಭರಮಪ್ಪ ನಗರ, ತೋಟಪ್ಪ ಶಿಂಟ್ರ, ನಿಂಗನಗೌಡ, ಮಹಾಂತೇಶ ಸಿಂದೋಗಿಮಠ, ನಾಗರಾಜ ಕಗ್ಗಲ್, ವೆಂಕರಡ್ಡಿ ಇಮ್ಮಡಿ, ನೀಲಪ್ಪ ಕರಿಗಾರ, ಮೋದಿನಸಾಬ, ಶೇಖಪ್ಪ, ನೀಲನಗೌಡ, ಹನುಮಂತಪ್ಪ ಗುಡಿ ಹಾಗೂ ಮುಖ್ಯ ಶಿಕ್ಷಕರು, ಶಿಕ್ಷಕರು ಇದ್ದರು.