ಜಿಲ್ಲೆ

ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

ಸೌಮ್ಯ ಆರ್

ಕಡಬ: ತಾಲೂಕು ಕೊಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವ ಮಾ.29ರಿಂದ ಏ.2ರ ತನಕ ಕೆಮ್ಮಿಂಜೆ ನಾಗೇಶ ತಂತ್ರಿ ನೇತೃತ್ವದಲ್ಲಿ ನಡೆಯಲಿದೆ. ಏ.3ರಂದು ಶ್ರೀ ದುಗಲಾಯಿ ದೈವದ ನೇಮೋತ್ಸವ ನಡೆಯಲಿದೆ.

ಮಾ.30ರಂದು ರಾತ್ರಿ ಬಲಿ ಹೊರಟು ಉತ್ಸವ, ಆತೂರಿನಿಂದ ಗೋಕುಲನಗರ, ಕೆ.ಸಿ.ಫಾರ್ಮ್ ತನಕ ಪೇಟೆ ಸವಾರಿ, ಕಟ್ಟೆಪೂಜೆಗಳು ನಡೆಯಲಿದೆ. ಮಾ.31ರಂದು ಬೆಳಗ್ಗೆ ಉತ್ಸವ ಆರಂಭವಾಗಲಿದ್ದು ಮಧ್ಯಾಹ್ನ ದರ್ಶನ ಬಲಿ, ಬಟ್ಟಲು ಕಾಣಿಕೆ, ಬಳಿಕ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಬಲಿ ಹೊರಟು ಉತ್ಸವ, ಆನೆಗುಂಡಿಯವರೆಗೆ ಪೇಟೆ ಸವಾರಿ, ಆನೆಗುಂಡಿಯಲ್ಲಿ ಕೆರೆ ಉತ್ಸವ, ಕಟ್ಟೆಪೂಜೆ, ಆನೆಗುಂಡಿ ಬೂಡಿನಿಂದ ದುಗಲಾಯಿ ದೈವದ ಭಂಡಾರ ತರುವುದು, ದೇವಸ್ಥಾನದಲ್ಲಿ ರಂಗಪೂಜೆ ನಡೆಯಲಿದೆ. ಬಳಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಏ.1ರಂದು ಬೆಳಗ್ಗೆ ಬಲಿ ಹೊರಟು ಉತ್ಸವ, ಸಾಯಂಕಾಲ ಬಲಿ ಹೊರಟು ಉತ್ಸವ, ರಕ್ತೇಶ್ವರಿ ಮತ್ತು ಹುಲಿ ದೈವಗಳ ನುಡಿಕಟ್ಟುಗಳು, ಮಹಾರಥೋತ್ಸವ, ಬಳಿಕ ಅಶ್ವತ್ಥ ಕಟ್ಟೆಪೂಜೆಗಳು ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಏ.2ರಂದು ಬೆಳಗ್ಗೆ 7.30ರಿಂದ ಬಾಗಿಲು ತೆರೆಯುವ ಮುಹೂರ್ತ, ಮಹಾಪೂಜೆ, ರಾತ್ರಿ 7ರಿಂದ ಬಲಿ ಹೊರಟು ಉತ್ಸವ, ವಸಂತ ಕಟ್ಟೆಯಲ್ಲಿ ಕಟ್ಟೆಪೂಜೆಗಳು, ಕೊಯಿಲ ಶಾಲೆಯಿಂದಾಗಿ ನೀಲಮೆ ಶ್ರೀ ಮಹಾವಿಷ್ಣು ದೇವಸ್ಥಾನ, ಕುರೋಳಿಕೆ ಮೂಲಕ ಕುಮಾರಧಾರಾದ ಸುದೆಂಗಳದವರೆಗೆ ಪೇಟೆ ಸವಾರಿ, ಕಟ್ಟೆಪೂಜೆಗಳು, ಗುಳಿಗ ಮತ್ತು ಪಂಜುರ್ಲಿ ದೈವಗಳ ನುಡಿಕಟ್ಟುಗಳು, ಅವಭೃತೋತ್ಸವ, ಧ್ವಜಾವರೋಹಣ, ಮಂತ್ರಾಕ್ಷತೆ ನಡೆಯಲಿದೆ. ಏ.3ರಂದು ಬೆಳಗ್ಗೆ ಸಂಪ್ರೋಕ್ಷಣೆ, ಬಳಿಕ ದುಗಲಾಯಿ ದೈವದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.