ರಾಣೆಬೆನ್ನೂರ: ರಸ್ತೆಯಲ್ಲಿ ಬಿದ್ದಿದ್ದ ಗುಂಡಿಯಲ್ಲಿ ಆಟೋರಿಕ್ಷಾ ಚಲಾಯಿಸಿದ ಪರಿಣಾಮ ಆಟೋದಲ್ಲಿ ಮಹಿಳೆ ಕೆಳಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿಯ ಮಾರುತಿ ನಗರದಲ್ಲಿ ಬುಧವಾರ ನಡೆದಿದೆ.
ವಾಣಿ ರಾಮಚಂದ್ರಪ್ಪ ಪಲ್ಮೇರಿ (38) ಮೃತ ಮಹಿಳೆ.
ಇವರು ಆಟೋರಿಕ್ಷಾದಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದ ಸಮಯದಲ್ಲಿ ಆಟೋರಿಕ್ಷಾ ಚಾಲಕ ರಸ್ತೆಯಲ್ಲಿ ಬಿದ್ದಿದ್ದ ಗುಂಡಿ ಗಮನಿಸಿದೆ ವೇಗವಾಗಿ ಗುಂಡಿ ಮೇಲೆ ಹಾಯಿಸಿದ್ದರಿಂದ ಮಹಿಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಕೂಡಲೇ ಅವರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.