Transparent umbrella under heavy rain against water drops splash background. Rainy weather concept. 
ಜಿಲ್ಲೆ

ಜಿಲ್ಲೆಯಲ್ಲಿ ಜೂ.1ರಿಂದ 5ರವರೆಗೆ ಸಾಧಾರಣ ಮಳೆ ನಿರೀಕ್ಷೆ: ಭಾರತೀಯ ಹವಾಮಾನ ಇಲಾಖೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲೆಯಲ್ಲಿ ಜೂ.1ರಿಂದ 5ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ತಿಳಿಸಿದೆ.

ಜೂ.1ರಂದು 4 ಮಿ.ಮೀ, 2ರಂದು 9 ಮಿ.ಮೀ, 3ರಂದು 50 ಮಿ.ಮೀ, 4ರಂದು 10 ಮಿ.ಮೀ, 5ರಂದು 20 ಮಿ.ಮೀ ಪ್ರಮಾಣದ ಮಳೆಯಾಗಬಹುದು. ಈ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಅಂತೆಯೇ ಗರಿಷ್ಟ 31 ರಿಂದ 34 ಹಾಗೂ ಕನಿಷ್ಟ 19.1 ರಿಂದ 20.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿ ಪ್ರತಿ ಗಂಟೆಗೆ 12 ರಿಂದ 15 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಮಾಹಿತಿ ನೀಡಿದೆ.