ಜಿಲ್ಲೆ

ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕಾಸರಗೋಡು ಜಿಲ್ಲೆ ಬದಿಯಡ್ಕದ ಗಡಿನಾಡ ಗಾನಕೋಗಿಲೆ ಕಲಾವಿದರ ವೇದಿಕೆ ಮತ್ತು ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ಕೇರಳದ ಕಾಸರಗೋಡು ಜಿಲ್ಲೆ ಬಾರಡ್ಕದಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗಿನ ಹಿನ್ನೆಲೆ ಗಾಯಕಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಅವರ ಸಂಗೀತ ಮತ್ತು ಸಾಹಿತ್ಯ ಸೇವೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘಟನೆಯ ಪ್ರಮುಖರು ಇದ್ದರು.