ಜಿಲ್ಲೆ

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Mangaluru - Hariprasad Rai



ಮಂಗಳೂರು : ಕೃಷಿ ಇಲಾಖೆಯ ವತಿಯಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ದ.ಕ.ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರಬೇಕು. ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.
ಕೃಷಿ ಪಂಡಿತ ಪ್ರಶಸ್ತಿಯ ಬಹುಮಾನದ ಮೊತ್ತ ಪ್ರಥಮ - 125000 ರೂ., ದ್ವಿತೀಯ 100000 ರೂ. ತೃತೀಯ 75000 ರೂ. ಹಾಗೂ ಉದಯೋನ್ಮುಖ 50000 ರೂ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.