ಜಿಲ್ಲೆ

ಜೂ.25 ನಗರದಲ್ಲಿ ಡಾ.ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ ಪ್ರದಾನ ಸಮಾರಂಭ: ಪ್ರತಿಷ್ಠಾನದ ಅಧ್ಯಕ್ಷೆ ಎಚ್.ಆರ್.ಸುಜಾತಾ ಮಾಹಿತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ಡಾ.ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ವತಿಯಿಂದ ಜೂ.25ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಾ.ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಎಚ್.ಆರ್.ಸುಜಾತಾ ತಿಳಿಸಿದರು.

ಈ ಬಾರಿ ಲೇಖಕಿ ದಯಾ ಗಂಗನಘಟ್ಟ ಅವರ ‘ಉಪ್ಪುಚ್ಚಿ ಮುಳ್ಳು’ ಕೃತಿ ಬೆಸಗರಹಳ್ಳಿ ರಾಮಣ್ಣ ಕಥಾ ಸಂಕಲನ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ 25 ಸಾವಿರ ರೂ ನಗದಿನೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಪ್ರೊ.ಹಿ.ಶಿ.ರಾಮಚಂದ್ರೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಂಶೋಧಕ ಡಾ.ಸಿ.ವೀರಣ್ಣ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ವಿಮರ್ಶಕ ಡಾ.ಸುಭಾಷ್ ರಾಜಮಾನೆ ವಿಜೇತ ಕೃತಿ ಕುರಿತು ಮಾತನಾಡಲಿದ್ದು, ಪ್ರಶಸ್ತಿ ಪುರಸ್ಕೃತ ಕೃತಿಯ ಲೇಖಕಿ ದಯಾ ಗಂಗನಘಟ್ಟ ಹಾಗೂ ಪ್ರತಿಷ್ಠಾನದ ಆಜೀವ ಸದಸ್ಯೆ ಡಿ.ಪಿ.ರಾಜಮ್ಮ ರಾಮಣ್ಣ ಉಪಸ್ಥಿತರಿರಲಿದ್ದಾರೆ. ಇದೇ ವೇಳೆ ಸಾಹಿತಿ ಬಿ.ಚಂದ್ರೇಗೌಡ ಅವರು ಬರೆದಿರುವ ‘ಹಿಂಗಿದ್ದ ನಮ್ಮ ರಾಮಣ್ಣ’ ಕೃತಿಯನ್ನು ಬಿಡುಗಡೆಗೊಳಿಸಲಾಗುತ್ತದೆ. ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ಗಾಯಕಿ ಸಾಧ್ವಿನಿ ಕೊಪ್ಪ ಮತ್ತು ತಂಡದಿಂದ ಭಾವಗಾಯನ ಏರ್ಪಡಿಸಲಾಗಿದೆ ಎಂದು ಹೇಳಿದರು.

ಟ್ರಸ್ಟಿ ರಾಜೇಂದ್ರ ಪ್ರಸಾದ್, ರಾಕೇಶ್ ಇದ್ದರು.