ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲಪಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಕೆ.ಲೋಕೇಶ್ ಅವರಿಗೆ ಬ್ಯಾಂಕ್ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಕೊಡಂದೇರ ಗಣಪತಿ ಪ್ರಶಸ್ತಿ ನೀಡಿ ಗೌರವಿಸಿದರು. 
ಜಿಲ್ಲೆ

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ

ನಾಪೋಕ್ಲು: ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ 2022- 23ನೇ ಸಾಲಿನಲ್ಲಿ ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದೆ.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2022 -23ರ ಸಾಲಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಕೊಡಂದೇರ ಗಣಪತಿ, ಸಂಘದ ಅಧ್ಯಕ್ಷ ನಾಗೇಶ್ ಕುಂದಲಪಾಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.