ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಜ್ಯಮಟ್ಟದ ಉತ್ತಮ ಶಾಲೆ ಪ್ರಶಸ್ತಿಗೆ ಭಾಜನವಾಗಿದೆ. 2023- 24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ನಿಮಿತ್ತ ಕರ್ನಾಟಕ ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿಯಿಂದ ಅಂತಾರಾಷ್ಟ್ರೀಯ ಶಿಕ್ಷಕ ದಿನೋತ್ಸವದ ಅಂಗವಾಗಿ ಇಲ್ಲಿನ ನೌಕರರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಧನೆಗೆ ಕಾರಣರಾದ ಮುಖ್ಯಾಧ್ಯಾಪಕಿ ರೇಣು ಪಾಟೀಲ ಹಾಗೂ ಶಿಕ್ಷಕರನ್ನು ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಅಭಿನಂದಿಸಿದರು.