ಶಿರ್ವ: ಮೂಡುಬೆಳ್ಳೆ ನೆಲ್ಲಿಕಟ್ಟೆಯ ಜ್ಞಾನಗಂಗಾ ಪದವಿ ಪೂರ್ವ ಕಾಲೇಜಿನ 8ನೇ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ ಕುಂತಳನಗರದ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.
ಆಡಳಿತ ಮಂಡಳಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಉಡುಪಿ ಜಿಐಇಸಿ ಪ್ರಭಾರ ಕಾರ್ಯದರ್ಶಿ ವೈ. ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ವಿಜೇತ ಸರ್ಕಾರಿ ಪ್ರೌಢಶಾಲಾ ಶಿಕ್ಷಕಿ ಜಯಂತಿ ಶೆಡ್ತಿ ಅವರನ್ನು ಸನ್ಮಾನಿಸಲಾಯಿತು.
ಉಡುಪಿ ನಗರಸಭಾ ಸದಸ್ಯ ಚಂದ್ರಶೇಖರ್ ಶೇರಿಗಾರ್, ಶಾಲಾ ಸಂಚಾಲಕ ಸದಾನಂದ ಕಾಂಚನ್, ಮುಖ್ಯಶಿಕ್ಷಕ ಗಿರೀಶ್ ನಾಯ್ಕ, ಇಂದಿರಾನಗರ ಸರ್ಕಾರಿ ಪ್ರೌಢಶಾಲೆ ಕಾರ್ಯಾಧ್ಯಕ್ಷೆ ಪೂರ್ಣಿಮಾ, ಧನುಷ್, ಹರೀಶ್, ಶಶಿಕಲಾ ಉಪಸ್ಥಿತರಿದ್ದರು. ಪ್ರಾಂಶುಪಾಲ ಯು.ಎಲ್ ಭಟ್ ಸ್ವಾಗತಿಸಿದರು. ಭಾಸ್ಕರ ಆಚಾರ್ಯ ವಂದಿಸಿದರು. ದಿವ್ಯಾ ಕಾರ್ಯಕ್ರಮ ನಿರೂಪಿಸಿದರು.