ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಬುಧವಾರ 2024-25ನೇ ಸಾಲಿನ ರೋಟರಿ ಕ್ಲಬ್ ನೂತನ ಅಧ್ಯಕ್ಷ ಮೋಹನ್ ರೇವಣ್ಕರ್ ಇವರಿಗೆ ರೋಟರಿ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಪದಪ್ರದಾನಿಸಿದರು 
ಜಿಲ್ಲೆ

ಸಮಾಜಸೇವೆ ಬದುಕಲ್ಲಿ ಅವಿಸ್ಮರಣೀಯ : ಬಿ.ಎಂ.ಭಟ್

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಬೈಂದೂರು

ರೋಟರಿಯಿಂದ ರಚನಾತ್ಮಕ ಕೆಲಸಗಳ ಜತೆಗೆ ಈ ನೆಲ, ಜಲ ಪ್ರಕೃತಿ ಸಂರಕ್ಷಿಸುವ ಕಾರ್ಯ ಇನ್ನಷ್ಟು ಆಗಬೇಕಿದ್ದು, ಪ್ರತಿಯೋರ್ವ ರೋಟರಿ ಸದಸ್ಯರು ಇದರೊಂದಿಗೆ ಕೈಜೋಡಿಸಬೇಕು. ಸಮಾಜಕ್ಕೆ ನೀಡುವ ಸೇವೆ ಬದುಕಿನಲ್ಲಿ ಅವಿಸ್ಮರಣೀಯಗೊಳಿಸುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಹೇಳಿದರು.

ರೋಟರಿ ಸಮುದಾಯ ಭವನದಲ್ಲಿ ಬುಧವಾರ 2024-25ನೇ ಸಾಲಿನ ರೋಟರಿ ಪದಾಧಿಕಾರಿಗಳಿಗೆ ಪದ ಪ್ರದಾನಿಸಿ ಮಾತನಾಡಿದರು.
ಅಧ್ಯಕ್ಷ ಮೋಹನ್ ರೆವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ-1ರ ಸಹಾಯಕ ಗವರ್ನರ್ ಡಾ.ರಾಜೇಂದ್ರ ಶೆಟ್ಟಿ ಕ್ಲಬ್ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು. ಐವರು ನೂತನ ಸದಸ್ಯರು ಕ್ಲಬ್‌ಗೆ ಸೇರ್ಪಡೆಗೊಂಡರು. ಉಪನ್ಯಾಸಕ, ಸಾಹಿತಿ ಶ್ರೀಧರ ಶೇಟ್ ಶಿರಾಲಿ, ರೋಟರಿ ವಲಯ ಸೇನಾನಿ ಪ್ರದೀಪ್ ಡಿ.ಕೆ. ಉಪಸ್ಥಿತರಿದ್ದರು.

ಪೂರ್ಣಿಮಾ ಪೈ ಪ್ರಾರ್ಥಿಸಿದರು. ನಿರ್ಗಮನ ಅಧ್ಯಕ್ಷ ಶಿರೂರು ಪ್ರಸಾದ ಪ್ರಭು ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಹಿಂದಿನ ಸಾಲಿನ ಕಾರ್ಯಚಟುವಟಿಕೆಗಳ ವರದಿ ಮಾಚಿಸಿದರು. ವೈ.ಮಂಗೇಶ ಶ್ಯಾನುಭಾಗ್ ನಿರೂಪಿಸಿದರು. ಕಾರ್ಯದರ್ಶಿ ಸುನೀಲ್ ಎಚ್.ಜಿ. ವಂದಿಸಿದರು.

ಪ್ರತಿಭಾ ಪುರಸ್ಕಾರ, ಸಹಾಯಧನ

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಳಿಗೆ ಪ್ರತಿಭಾ ಪುರಸ್ಕಾರ, ಅರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಲಿಕಾ ಸಹಾಯಧನ ಹಾಗೂ ಆರೋಗ್ಯ ಸಂಬಂಧಿತರಾದವರಿಗೆ ವೈದ್ಯಕೀಯ ನೆರವು ನೀಡಲಾಯಿತು. ಐವರು ನೂತನ ಸದಸ್ಯರು ಕ್ಲಬ್‌ಗೆ ಸೇರ್ಪಡೆಗೊಂಡರು.