ಜಿಲ್ಲೆ

ರಾಮಕುಂಜ ಪ್ರೌಢಶಾಲೆ ತಂಡಗಳಿಗೆ ಪ್ರಶಸ್ತಿ

ಸೌಮ್ಯ ಆರ್

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಸಹಭಾಗಿತ್ವದಲ್ಲಿ ಮರ್ದಾಳ ಸೇಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ 17ರ ವಯೋಮಾನದ ಬಾಲಕ- ಬಾಲಕಿಯರ ಕಡಬ ವಲಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಬಾಲಕಿಯರ ತಂಡ ಪ್ರಥಮ, ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿವೆ.

ಬಾಲಕಿಯರ ವಿಭಾಗದಲ್ಲಿ ವಿದ್ಯಾರ್ಥಿನಿ ಸಿಂಚನಾ ಎಸ್. ಬೆಸ್ಟ್ ಡಿಫೆಂಡರ್ ಮತ್ತು ಧನ್ವಿ ಬೆಸ್ಟ್ ರೈಡರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ವೈಭವ್ ಬೆಸ್ಟ್ ರೈಡರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಹಾಗೂ ಮುಖ್ಯಗುರು ಸತೀಶ್ ಭಟ್ ಮಾರ್ಗದರ್ಶನ ನೀಡಿದ್ದರು.