ಜಿಲ್ಲೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಪ್ರಸಿನ್ ಕೆ.ಆರ್

ನಾಪೋಕ್ಲು: ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ನೀಡಿ ಗೌರವಿಸಲಾಯಿತು.

ಹೊದ್ದೂರು ಗ್ರಾಮ ಪಂಚಾಯಿತಿಯ ಹೊದವಾಡ ಗ್ರಾಮದ ರಾಫಲ್ಸ್ ಇಂಟರ್‌ನ್ಯಾಷನಲ್ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಮುಖ್ಯ ಕಾರ್ಯದರ್ಶಿ ರಫೀಕಲಿ ಕುಂಡಂಡ ಕುಂಜಿಲ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ, ಪಾರಿತೋಷಕ ಮತ್ತು ನಗದು ನೀಡಿ ಗೌರವಿಸಿದರು.

ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ವಿದ್ಯಾರ್ಥಿಗಳಿಗೆ ಸಾಮಾಜಿಕ ಕೆಡುಕುಗಳ ಬಗ್ಗೆ ಮತ್ತು ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕುಂಜಿಲ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಗಂಗಮ್ಮ, ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ಕಲಿಯಾಟಂಡ ಶಾರದಾ, ರಾಫಲ್ಸ್ ಕಾಲೇಜು ಪ್ರಾಂಶುಪಾಲ ತನ್ವೀರ್, ಬಲ್ಲಮಾವಟಿ ಶಾಲೆಯ ಶಿಕ್ಷಕ ಮೆಹಬೂಬ್ ಮಾಸ್ಟರ್, ಶಂಸುಲ್ ಉಲಮಾ ಎಜುಕೇಶನ್ ಅಕಾಡೆಮಿ ಕಾರ್ಯದರ್ಶಿ ಬಷೀರ್ ಎಡಪಲ, ಮರ್ಕಜ್ ವಿದ್ಯಾ ಸಂಸ್ಥೆಯ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಹಾಜಿ ಕುಂಜಿಲ ಮತ್ತು ಆಕ್ಸ್‌ಫರ್ಡ್ ಶಾಲೆಯ ಮಾಲೀಕ ಶಾಹಿದ್ ಕೊಟ್ಟಮುಡಿ, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.