ರಾಯಚೂರು ಡಾ.ಎಪಿಜೆ ಅಬ್ದುಲ್ ಕಲಾಂ ಸಮಾಜ ಸೇವಾ ಸಂಸ್ಥೆಯಿಂದ ಆ.3 ರಂದು ನಗರದ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸಂಸ್ಥೆಯ 14ನೇ ವರ್ಷ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆಣದು ಸಂಸ್ಥೆಯ ಕಾರ್ಯದರ್ಶಿ ನರಸಿಂಹಲು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಸಾನಿಧ್ಯವನ್ನು ಕಿಲ್ಲೇ ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರು, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ರಾಜಯೋಗಿನಿ ಸ್ಮೀತ ಅಕ್ಕ, ಓಂ ಸಾಯಿ ಧ್ಯಾನ ಮಂದಿರದ ಸಾಯಿಕಿರಣ ಆದೋನಿ ಸಾನಿಧ್ಯ ವಹಿಸಲಿದ್ದಾರೆ. ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ,ಪಾಲಿಕೆ ಅಧ್ಯಕ್ಷ ಸಾಜೀದ್ ಸಮೀರ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸದರ ಬಜಾರ ಠಾಣೆಯ ಸಿಪಿಐ ಉಮೇಶ ಕಾಂಬ್ಳೆ, ಆರೋಗ್ಯ ಅಧಿಕಾರಿ ಡಾ.ನಂದಿತಾ.ಎಂ.ಎನ, ಪತ್ರಕರ್ತ ರಮಾಕಾಂತ ಅನೇಕರು ಆಗಮಿಸಲಿದ್ದಾರೆ. ಜತೆಗೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ 15 ಜನ ಸಾಧಕರಿಗೆ ಡಾ.ಎ.ಪಿ.ಜೆ. ಅಬ್ಯುಲ್ ಕಲಂ ಅತ್ಯುತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ವಿಶ್ವನಾಥರೆಡ್ಡಿ, ನರಸಪ್ಪ ಎಲೆಬಿಚ್ಚಾಲಿ, ಮನ್ಸೂರು ಇದ್ದರು.