ಚಿಕ್ಕಮಗಳೂರಿನ ಲಯನ್ಸ್‌ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ.ಎಂ.ರವಿ ಉದ್ಘಾಟಿಸಿದರು. 
ಜಿಲ್ಲೆ

ಮಾರಕ ರೋಗಗಳ ಬಗ್ಗೆ ಜಾಗೃತಿ ಅಗತ್ಯ

ಚಿಕ್ಕಮಗಳೂರು: ಮಾರಕ ರೋಗಗಳ ಬಗ್ಗೆ ಜಾಗೃತಿ ವಹಿಸುವುದರಿಂದ ರೋಗಗಳಿಂದ ಮುಕ್ತರಾಗಬಹುದು. ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ.ಎಂ.ರವಿ ಹೇಳಿದರು.
ನಗರದ ಲಯನ್ಸ್ ಕ್ಲಬ್ ಆವರಣದಲ್ಲಿ ಶುಕ್ರವಾರ ಮುಲ್ಕಿಯ ಬಪ್ಪನಾಡು ಇನ್ಸ್‌ಫಯರ್ ಮತ್ತು ಸೂರತ್ಕಲ್‌ನ ಶ್ರೀ ನಿವಾಸ ಆಸ್ಪತ್ರೆ ಸಹಯೋಗದೊಂದಿಗೆ ಬಿ.ಎನ್.ಮಲ್ಲೇಶ್ ಸ್ಮರಣಾರ್ಥ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದಿನಕ್ಕೊಂದು ಮಾರಕ ರೋಗಗಳು ಕಾಣಿಸಿಕೊಳ್ಳುತಿದ್ದು, ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲದು ಎಂದರು.
ಲಯನ್ಸ್ ಸುವರ್ಣ ಮಹೋತ್ಸವ ಆಚರಣಾ ಸ್ವಾಗತ ಸಮಿತಿ ಅಧ್ಯಕ್ಷ ಡಾ.ಜೆ.ಪಿ. ಕೃಷ್ಣೇಗೌಡ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ, ಆರೋಗ್ಯವೇ ಸಂಪತ್ತು. ಇತ್ತೀಚಿನ ದಿನಗಳಲ್ಲಿ ಕಡಿಮೆ ವಯಸ್ಸಿನಲ್ಲೇ ಹೃದಯಾಘಾತದಂಥ ಅಕಾಲಿಕ ಸಾವುಗಳು ಉಂಟಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು.
ಲಯನ್ಸ್ ಕ್ಲಬ್‌ನ ಪ್ರಮುಖರಾದ ಚಿದಾನಂದ, ಎಚ್.ಆರ್.ಹರೀಶ್, ಮಂಗಳೂರಿನ ಬಪ್ಪುನಾಡು ಲಯನ್ಸ್ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ವೈದ್ಯರಾದ ಡಾ.ಶೀತಲ್, ಡಾ.ಶರಣ್, ಬಪ್ಪುನಾಡು ಲಯನ್ಸ್ ಸಂಸ್ಥೆ ಅಧ್ಯಕ್ಷ ಸುಧೀರ್ ಬಾಳಿಗ ಉಪಸ್ಥಿತರಿದ್ದರು.