ಹೊಸನಗರ ತಾಲೂಕಿನ ಅರಮನೆಕೊಪ್ಪ ಪಂಚಾಯಿತಿಯಲ್ಲಿ ಮಹಿಳಾ ಗ್ರಾಮಸಭೆಯಲ್ಲಿ ಪಾಲ್ಗೊಂಡವರು.  
ಜಿಲ್ಲೆ

ಮಹಿಳಾ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ

ಹೊಸನಗರ: ಮಹಿಳಾ ದೌರ್ಜನ್ಯ ತಡೆಗೆ ನಿರಂತರ ಜಾಗೃತಿ ಅಗತ್ಯ ಎಂದು ಮಹಿಳಾ ಆಪ್ತ ಸಮಾಲೋಚಕಿ ಪ್ರೇಮಾ ಕಾಂತರಾಜ್ ಹೇಳಿದರು.

ತಾಲೂಕಿನ ಅರಮನೆಕೊಪ್ಪ ಗ್ರಾಪಂಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಗ್ರಾಮಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಕೌಟುಂಬಿಕ, ಸಾಮಾಜಿಕವಾಗಿ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಗೆ ದಿನದ 24 ಗಂಟೆ ಕೂಡ ಸಹಕಾರ ನೀಡಲು ಮಹಿಳಾ ಸಾಂತ್ವನ ಕೇಂದ್ರ ಬದ್ಧವಾಗಿರುತ್ತದೆ ಎಂದರು. ಮಹಿಳಾ ದೌರ್ಜನ್ಯ ಪ್ರಕರಣಗಳು ಕಂಡು ಬಂದಾಗ ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಸಾಂತ್ವನ ಕೇಂದ್ರದಲ್ಲಿ ಮಹಿಳೆಯ ಆರೋಗ್ಯ, ಆಪ್ತ ಸಮಾಲೋಚನೆ, ಆಶ್ರಯ ನೀಡಲಾಗುವುದು. ಬಗೆ ಹರಿಯದಿದ್ದಲ್ಲಿ ಕಾನೂನಿನ ಹೋರಾಟಕ್ಕೂ ಸಹಕರಿಸಲಾಗುವುದು ಎಂದು ತಿಳಿಸಿದರು.
ಸಿಡಿಪಿಒ ಇಲಾಖೆಯ ಮೇಲ್ವಿಚಾರಕಿ ವನಮಾಲಾ, ಬೇಟಿ ಬಚಾವೋ ಬೇಟಿ ಪಡಾವೋ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ಕುರಿತು ಮಾಹಿತಿ ನೀಡಿದರು. ಪಿಡಿಒ ಪರಮೇಶ್ವರ್ ಇತರರಿದ್ದರು.