ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವಾತಂತ್ರ‍್ಯೋತ್ಸವದ ಸಂಭ್ರಮಾಚರಣೆಯಲ್ಲಿ ದೇಶದ ಐತಿಹಾಸಿಕ ಹೋರಾಟ ಮತ್ತು ಸಾಧನೆಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ನಮ್ಮ ಜವಾಬ್ದಾರಿ ಆಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಸ್ಮಾರಕಗಳ ಛಾಯಾಚಿತ್ರ ಪ್ರದರ್ಶನವೂ ಅದರಲ್ಲಿ ಒಂದಾಗಿದೆ ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ನಗರದ ಆರ್ಟ್ ಗ್ಯಾಲರಿಯಲ್ಲಿ ಕೇಂದ್ರ ಪುರಾತತ್ವ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಸೋಮವಾರ ಆಯೋಜಿಸಿದ್ದ `ಉತ್ತರ ಕರ್ನಾಟಕ ವಾಸ್ತುಶಿಲ್ಪ ಪರಂಪರೆ ಹಾಗೂ ಸ್ಮಾರಕಗಳು ಅಂದು ಮತ್ತು ಇಂದು' ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ‍್ಯದ ಬಗ್ಗೆ ಅಭಿಮಾನ, ಹೆಮ್ಮೆ ಪಡುವಂತೆ ಮಕ್ಕಳನ್ನು ಬೆಳೆಸಬೇಕು. ನಮ್ಮ ಪರಂಪರೆ, ಸಂಸ್ಕೃತಿಯ ಅರಿವು ಇದ್ದಾಗ ಮಾತ್ರ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಸಾಧ್ಯ. 77 ಪಿಯು ಕಾಲೇಜುಗಳಲ್ಲಿ ಜಿಲ್ಲೆಯ ಐತಿಹಾಸಿಕತೆ ಕುರಿತು ಸರಣಿ ಉಪನ್ಯಾಸ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ವಿಶ್ವವಿದ್ಯಾಲಯ ಮಟ್ಟದ ವಿಚಾರ ಸಂಕಿರಣ, ರಾಜ್ಯ ಪುರಾತತ್ವ ಇಲಾಖೆಯಿಂದ ಐತಿಹಾಸಿಕ ದಾಖಲೆಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಭಾರತೀಯ ಪುರಾತತ್ವ ಸರ್ವೇಕ್ಷಣ ಧಾರವಾಡ ವಲಯ ಅಽÃಕ್ಷಕ ಪುರಾತತ್ವ ಅಽಕಾರಿ ಡಾ. ರೇಷ್ಮಾ ಸಾವಂತ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಅಽÃಕ್ಷಕ ಪುರಾತತ್ವ ಅಽಕಾರಿ ಶ್ರೀಗುರು ಬಾಗಿ ವಂದಿಸಿದರು. ಡಾ. ದೇವರಾಜು ಸಾರಂಗಮಠ ವಿದ್ಯಾರ್ಥಿಗಳಿಗೆ ಛಾಯಾಚಿತ್ರಗಳನ್ನು ವಿವರಿಸಿದರು.
ಡಿಡಿಪಿಐ ಎಸ್.ಎಸ್. ಕೆಳದಿಮಠ, ಬಿಇಒ ಅಶೋಕ ಸಿಂದಗಿ, ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಸವರಾಜ ಕುರಿಯವರ, ಉಪನ್ಯಾಸಕ ಎಸ್.ಕೆ. ಪತ್ತಾರ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀದೇವಿ ಲದ್ದಿಮಠ, ಡಾ. ಗಾಯತ್ರಿ ಜೋಶಿ, ಶಿಕ್ಷಕರಾದ ಎಂ.ಜಿ. ಹಿರೇಮಠ, ಅರ್ಜುನ ಲಮಾಣಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.