ಜಿಲ್ಲೆ

ಮಹೇಶ ಪಿಯು ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಅರಿವು

ಹುಬ್ಬಳ್ಳಿ : ನಗರದ ಎನ್.ಎಲ್. ಸೊಸೈಟಿಯ ಡಾ. ಆರ್.ಬಿ. ಪಾಟೀಲ ಮಹೇಶ ಪಿ.ಯು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ 2012ರ ಕುರಿತು ಅರಿವು ಕಾರ್ಯಕ್ರಮ ಇತ್ತೀಚೆಗೆ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಮೋಹನ ಎಚ್.ಕೆ., ಪ್ರತಿಯೊಬ್ಬರೂ ವಿದ್ಯಾರ್ಥಿ ದೆಸೆಯಿಂದಲೇ ಸುಸಂಸ್ಕ್ರತರಾಗಬೇಕು. ಭವಿಷ್ಯದ ಸಾಧನೆಗಾಗಿ ತೊಡಗಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಾಲಕರು ತಮ್ಮ ಮಕ್ಕಳಿಗಾಗಿ ಅಪರಾಧ ಮನೋಭಾವನೆ ಬಾರದಂತಹ ವಾತಾವರಣ ಸೃಷ್ಠಿಸಬೇಕು. ಅಂದಾಗ ಮಾತ್ರ ಆರೋಗ್ಯವಂತಹ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪಿಎಲ್​ವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪಿಎಲ್​ವಿನಸ್ರೀನ್ ಮುಶಿರ್ ಮಾತನಾಡಿ, ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಿದರು.

ಉಪ ಪ್ರಾಚಾರ್ಯ ರಮೇಶ ಹೊಂಬಾಳಿ ಹಾಗೂ ಕಾಲೇಜಿನ ಪೋಕ್ಸೋ ವಿರ್ವಹಣಾ ಸಮಿತಿಯ ಮುಖ್ಯಸ್ಥರಾದ ಡಾ. ವಿದ್ಯಾ ಪಾಲಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕಿ ಆತ್ಮಾ ಸಿಂಧಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ನೀಲ್ ಪ್ರತಾಪನ್ ಹಾಗೂ ಇತರರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಎನ್. ಸಂಜನಾ ನಿರೂಪಿಸಿದರು. ವಿದ್ಯಾರ್ಥಿನಿ ಮಿನಲ್ ಖಟವಟೆ ವಂದಿಸಿದರು.