ವಿಶ್ವ ಪ್ರಾಣಿಜನ್ಯ ರೋಗಗಳ ದಿನ ಜಿಲ್ಲಾಮಟ್ಟದ ಉದ್ಘಾಟನೆ ಮತ್ತು ಜಾಗೃತಿ ವಿಚಾರ ಸಂಕಿರಣದಲ್ಲಿ ಕುತ್ತಿಕೋಲ್ ಗ್ರಾಪಂ ಅಧ್ಯಕ್ಷ ಮುರಳಿ ಪಯ್ಯಂಗಾನಂ ಮಾತನಾಡಿದರು. 
ಜಿಲ್ಲೆ

ಪ್ರಾಣಿಜನ್ಯ ರೋಗ ವಿಚಾರ ಸಂಕಿರಣ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ವಿಶ್ವ ಪ್ರಾಣಿಜನ್ಯ ರೋಗಗಳ ದಿನಾಚರಣೆ ಜಿಲ್ಲಾಮಟ್ಟದ ಉದ್ಘಾಟನೆ ಹಾಗೂ ಜಾಗೃತಿ ವಿಚಾರ ಸಂಕಿರಣ ಕಾರಡ್ಕ ಬ್ಲಾಕ್ ಪಂಚಾಯಿತಿ ಸಭಾಂಗಣದಲ್ಲಿ ಜರುಗಿತು.

ಜಿಲ್ಲಾಮಟ್ಟದ ಉದ್ಘಾಟನೆಯನ್ನು ಕುತ್ತಿಕೋಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುರಳಿ ಪಯ್ಯಂಗಾನಂ ನೆರವೇರಿಸಿದರು. ಕಾರಡ್ಕ ಬ್ಲಾಕ್ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಪಿ.ಅಧ್ಯಕ್ಷತೆ ವಹಿಸಿದ್ದರು. ಕುತ್ತಿಕೋಲ್ ಗ್ರಾಪಂ ಉಪಾಧ್ಯಕ್ಷೆ ಶೋಭನಾ ಕುಮಾರಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಮೀರ್ ಕುಂಭಕೋಟ್, ವಾರ್ಡ್ ಸದಸ್ಯರಾದ ವಿ.ಕೃಷ್ಣನ್, ಮಾಧವನ್ ಪಿ., ಕೆ.ಆರ್.ವೇಣು, ಜಿಲ್ಲಾ ಡೆಪ್ಯುಟಿ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಪ್ರಶಾಂತ್ ಎನ್.ಪಿ, ಕುತ್ತಿಕೋಲ್ ಗ್ರಾಪಂ ಕಾರ್ಯದರ್ಶಿಅನಿಲ್ ಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಸ್ವಾಗತಿಸಿದರು. ಬಂದಡ್ಕ ಕುಟುಂಬ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಸುನೀಶ ಜಾರ್ಜ್ ವಂದಿಸಿದರು.

ಆನಂದಾಶ್ರಮ ಕುಟುಂಬ ಆರೋಗ್ಯ ಕೇಂದ್ರದ ಸಹಾಯಕ ಸರ್ಜನ್ ಡಾ.ವಿದ್ಯಾ ಕೆ., ಕುತ್ತಿಕ್ಕೋಲ್ ಸರ್ಕಾರಿ ಪಶುವೈದ್ಯಕೀಯ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಜಯಕೃಷ್ಣನ್ ಬಿ.ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸಿದರು. ಹಸಿರು ಕ್ರಿಯಾ ಸೇನೆ, ಕುಟುಂಬಶ್ರೀ ಕಾರ್ಯಕರ್ತರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಪ್ರಚಾರಕರು ಆಶಾ ಕಾರ್ಯಕರ್ತರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಜಿಲ್ಲಾ ವೈದ್ಯಕೀಯ ಕಚೇರಿ (ಆರೋಗ್ಯ) ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದೆ.