ಜಿಲ್ಲೆ

ಡೆಂೆತಡೆಗೆ ಜಾಗೃತಿಯೇ ಮದ್ದು

ಬೇಲೂರು: ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಡೆಂಘೆ ಹಾಗೂ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟುವುದಕ್ಕಾಗಿ ಆರೋಗ್ಯ ಇಲಾಖೆ ಹಾಗೂ ಪುರಸಭೆಯಿಂದ ಸೊಳ್ಳೆಗಳ ನಿಯಂತ್ರಣಕ್ಕಾಗಿ ಕ್ರಿಮಿನಾಶಕ ಸಿಂಪಡಿಸಿ ಪ್ರತಿ ಗ್ರಾಮಗಳಲ್ಲೂ ಜಾಗೃತಿ ಮೂಡಿಸಬೇಕು ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಕೆಲವೆಡೆ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಘೆ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸುತ್ತಿದೆ. ಇದರ ಜತೆಗೆ ಬೇಲೂರು ಪುರಸಭೆ ವ್ಯಾಪ್ತಿಯಲ್ಲೂ ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಗರಿಕರು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಗೆ ದಾಖಲಾಗುತ್ತಿರುವುದು ಕಂಡು ಬರುತ್ತಿದೆ. ಕೆಲ ದಿನಗಳ ಹಿಂದೆ 23ನೇ ವಾರ್ಡ್ ಹಾಗೂ 17ನೇ ವಾರ್ಡ್‌ನಲ್ಲಿ ಇಬ್ಬರು ಡೆಂಘೆ ಜ್ವರದಿಂದ ಮೃತಪಟ್ಟಿದ್ದಾರೆ. ಜತೆಗೆ ಇತರೆ ಜ್ವರದಂತಹ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಜನರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಮತ್ತೆ ಕೆಲವರು ಹಾಸನ ಜಿಲ್ಲಾಸ್ಪತ್ರೆಗೆ ತೆರಳುತ್ತಿದ್ದಾರೆ.
ಮನೆಗಳ ಸುತ್ತಲಿನ ಪ್ರದೇಶದಲ್ಲಿ ಎಲ್ಲಿಯೂ ನೀರು ನಿಲ್ಲದಂತೆ, ಕಸ ಕಡ್ಡಿಗಳು ಹರಡದಂತೆ ಎಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದೆ. ಪುರಸಭೆ ವ್ಯಾಪ್ತಿಯ ಕೆಲ ವಾರ್ಡ್‌ಗಳಲ್ಲಿನ ಬೀದಿಗಳ ಚರಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುತ್ತಿದೆ. ಪುರಸಭೆ ಸಿಬ್ಬಂದಿ ಸ್ವಚ್ಛ ಮಾಡುತ್ತಾರೆ ಎಂಬುದಕ್ಕಿಂತ ನಮ್ಮ ಆರೋಗ್ಯ ದೃಷ್ಟಿಯಿಂದಲಾದರೂ ಮನೆಗಳ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡು, ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗಬೇಕಿದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟುವುದರೊಂದಿಗೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಮೊದಲು ಅರ್ಥ ಮಾಡಿಕೊಂಡಾಗ ಮಾತ್ರ ಇಂತಹ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪುರಸಭೆ ಮತ್ತು ಆರೋಗ್ಯ ಇಲಾಖೆ ಅರಿವು ಮೂಡಿಸಬೇಕಿದೆ ಎಂಬುದು ಪಟ್ಟಣದ ನಿವಾಸಿಗಳ ಮಾತು.

ಪುರಸಭೆ ಸಿಬ್ಬಂದಿ ಎಲ್ಲ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಕ್ರಿಮಿನಾಶಕ ಸಿಂಪಡಿಸುತ್ತಿರುವುದು ಶ್ಲಾಘನೀಯ. ವಾರದಲ್ಲಿ ಎರಡು ದಿನವಾದರೂ ಪ್ರತಿ ಬೀದಿಯಲ್ಲಿ ಕ್ರಿಮಿನಾಶಕ ಸಿಂಪಡಣೆಗೆ ಮುಂದಾದರೆ ಅನುಕೂಲವಾಗುತ್ತದೆ. ಇದೇ ರೀತಿ ಗ್ರಾಮ ಪಂಚಾಯಿತಿಗಳಿಂದಲೂ ಕ್ರಿಮಿನಾಶಕ ಸಿಂಪಡಿಸಿದರೆ ಡೆಂಘೆ ಮತ್ತು ಸಾಂಕ್ರಾಮಿಕ ರೋಗಗಳಿಂದ ತಾಲೂಕನ್ನು ಮುಕ್ತ ಮಾಡಬಹುದು ಎಂಬ ಅಭಿಪ್ರಾಯಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ಪುರಸಭೆ ವ್ಯಾಪ್ತಿಯಲ್ಲಿ ಡೆಂಘೆ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರತಿನಿತ್ಯ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಪ್ರತಿ ವಾರ್ಡ್‌ಗಳಲ್ಲೂ ಸೊಳ್ಳೆ ನಿಯಂತ್ರಣಕ್ಕಾಗಿ ಕ್ರಿಮಿನಾಶಕ ಸಿಂಪಡಿಸಲಾಗುತ್ತದೆ. ಆರೋಗ್ಯ ಇಲಾಖೆ ಹಾಗೂ ಪುರಸಭೆಯಿಂದ ಲಾರ್ವಾ ಸಮೀಕ್ಷೆ ನಡೆಸಿ ನಾಗರಿಕರಿಗೆ ಸ್ವಚ್ಛತೆ ಕಾಪಾಡುವಂತೆ ಅರಿವು ಮೂಡಿಸುತ್ತಿದ್ದೇವೆ.

ಇಂದು, ಮುಖ್ಯಾಧಿಕಾರಿ ಪುರಸಭೆ ಬೇಲೂರು

ಪಟ್ಟಣದಲ್ಲಿ ಡೆಂಘೆ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ತಾಲೂಕಿನಲ್ಲಿ ನಮ್ಮ ಸಿಬ್ಬಂದಿ ತಿಂಗಳ ಮೊದಲ ಶುಕ್ರವಾರ ಮತ್ತು ಮೂರನೇ ಶುಕ್ರವಾರ ಮನೆ ಮನೆಗೆ ತೆರಳಿ ಲಾರ್ವಾ ಪರೀಕ್ಷೆ ನಡೆಸುತಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಡೆಂಘೆ ತಡೆಗಟ್ಟುವುದಕ್ಕಾಗಿ ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾಕಾರ್ಯಕರ್ತೆಯರು, ಸಿಬ್ಬಂದಿ ಕ್ರಮಕ್ಕೆ ಮುಂದಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಡಾ.ವಿಜಯ್, ತಾಲೂಕು ಆರೋಗ್ಯಾಧಿಕಾರಿ ಬೇಲೂರು