ಆಲೂರು : ತಾಲೂಕಿನ ಪಾಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ನೀಲಮ್ಮ ಹಾಗೂ ಉಪಾಧ್ಯಕ್ಷರಾಗಿ ಎಸ್. ಆರ್.ಅಶ್ವತ್ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಅಧ್ಯಕ್ಷರಾಗಿದ್ದ ಭವ್ಯ ಪುರುಷೋತ್ತಮ್ ಹಾಗೂ ಉಪಾಧ್ಯಕ್ಷರಾಗಿದ್ದ ಉಮೇಶ್ ಅವರು ಜೆಡಿಎಸ್ ಪಕ್ಷದ ಆಂತರಿಕ ಒಪ್ಪಂದದಂತೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಈ ಸ್ಥಾನಕ್ಕೆ ನೀಲಮ್ಮ,ಉಪಾಧ್ಯಕ್ಷ ಸ್ಥಾನಕ್ಕೆ ಎಸ್. ಆರ್.ಅಶ್ವಥ್ ನಾಮಪತ್ರ ಸಲ್ಲಿಸಿದ್ದರು ಇವರ ಹೊರತುಪಡಿಸಿ ಬೇರೆ ಇನ್ಯಾವುದೇ ನಾಮಪತ್ರ ಸಲ್ಲಿಸದ ಕಾರಣ ಇವರನ್ನು ಅವಿ ರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ತಾ.ಪಂ ಕಾರ‌್ಯನಿರ್ವಹಣಾಧಿಕಾರಿ ಗಿರೀಶ್ ಕರ್ತವ್ಯ ನಿರ್ವಹಿಸಿದ್ದರು.