ಬೆಳಗಾವಿ ನಗರದದಲ್ಲಿ ಬುಧವಾರ ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಶಿವಾನಂದ ಭಾರತಿ ಸ್ವಾಮೀಜಿ, ನಿಜಗುಣ ದೇವರು, ಹುಬ್ಬಳ್ಳಿಯ ಅಭಿನವ ಸಿದ್ಧಾರೂಢ ಸ್ವಾಮೀಜಿ, ಮಾದರ ಚನ್ನಯ್ಯ ಸ್ವಾಮೀಜಿ ಸತ್ಕರಿಸಿದರು. 
ಜಿಲ್ಲೆ

ಅಯೋಧ್ಯೆ ಆಹ್ವಾನ ಸಂತಸ ತಂದಿದೆ

ಶಂಕರ ಗೆಜ್ಜಿ

ಬೆಳಗಾವಿ: ಅಯ್ಯೋಧೆಯಲ್ಲಿ ಜ.22ರಂದು ನಡೆಯಲಿರುವ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿರುವುದು ಸಂತಸ ತಂದಿದೆ ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ಬುಧವಾರ ಇಂಚಲದ ಶಿವಾನಂದ ಭಾರತಿ ಸ್ವಾಮೀಜಿ, ಪಿ.ಜಿ.ಹುಣಶ್ಯಾಳದ ನಿಜಗುಣ ದೇವರು, ಹುಬ್ಬಳ್ಳಿಯ ಅಭಿನವ ಸಿದ್ಧಾರೂಢ ಸ್ವಾಮೀಜಿ, ಮಾದರ ಚನ್ನಯ್ಯ ಸ್ವಾಮೀಜಿ, ಬೀದರನ ಗಣೇಶಾನಂದ ಮಹಾರಾಜರಿಂದ ಸತ್ಕಾರ ಸ್ವೀಕರಿಸಿ ಮಾತನಾಡಿದರು. ಜಿಲ್ಲೆಯ ಭಕ್ತರ, ಮಠಾಧೀಶರ ಪರವಾಗಿ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ. ಜ.19ರಂದು ಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳಸುತ್ತಿದ್ದೇವೆ. ಈ ಭಾಗದ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.