ರಾಯಚೂರಿನ ಜಿಲ್ಲಾ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಉದ್ಘಾಟಿಸಿದರು. ಡಿಎಚ್‌ಒ ಡಾ.ಸುರೇಂದ್ರಬಾಬು, ಜಿಲ್ಲಾ ಆಯುಷ್ ಅಕಾರಿ ಡಾ.ಶಂಕರಗೌಡ ಪಾಟೀಲ್, ವೈದ್ಯಾಕಾರಿಗಳಾದ ಡಾ.ಶಕೀಲ್, ಡಾ.ಅಮ್ಜದ್ ಶರ್ೀ ಇದ್ದರು. 
ಜಿಲ್ಲೆ

ಶಿಸ್ತುಬದ್ಧ ಜೀವನಕ್ಕೆ ಆಯುರ್ವೇದ ಸಹಕಾರಿ

ರಾಚಯ್ಯ ಸ್ವಾಮಿ

ರಾಯಚೂರು: ಆಯುರ್ವೇದ ಶಾರೀರಿಕ ಆರೋಗ್ಯ ರಕ್ಷಣೆ ಜತೆಗೆ ಶಿಸ್ತುಬದ್ಧ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಜನರು ಆಯುರ್ವೇದವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಹೇಳಿದರು.
ಸ್ಥಳೀಯ ಜಿಲ್ಲಾ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದಿನಮಾನದಲ್ಲಿ ಆಧುನಿಕ ತಂತ್ರಜ್ಞಾನ ಹೊಂದಿಕೊಂಡು, ವಿಷಪೂರಿತ ಆಹಾರ, ವೇಗವಾದ ಜಗತ್ತಿಗೆ ಅನುಗುಣವಾಗಿ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ ನಿರ್ಲಕ್ಷ ವಹಿಸುತ್ತಿದ್ದು, ಪ್ರತಿದಿನ ಯೋಗ ಮತ್ತು ಆಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಡಿಎಚ್‌ಒ ಡಾ.ಸುರೇಂದ್ರಬಾಬು ಮಾತನಾಡಿ, ಪ್ರಾಚೀನ ಕಾಲದಿಂದಲೂ ಪ್ರಚಲಿತವಾಗಿರುವ ಆಯುರ್ವೇದ ಶಾಸ ಮನುಷ್ಯನ ದೈಹಿಕ ಆರೋಗ್ಯ ಸುಧಾರಣೆ ಮಾತ್ರವಲ್ಲದೇ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆಯುಷ್ ಅಕಾರಿ ಡಾ.ಶಂಕರಗೌಡ ಪಾಟೀಲ್ ಮಾತನಾಡಿ, ಆಯುಷ್ ಇಲಾಖೆಯಿಂದ ಆಯುರ್ವೇದದ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಇಲಾಖೆಯಿಂದ ಆರೋಗ್ಯ ಔಷ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆ ವೈದ್ಯಾಕಾರಿಗಳಾದ ಡಾ.ಶಕೀಲ್, ಡಾ.ಅಮ್ಜದ್ ಶರ್ೀ, ಉಪನ್ಯಾಸಕರಾದ ಡಾ.ದೇಶಪಾಂಡೆ, ಡಾ.ಶಂಕರಗೌಡ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.