ದೇವದುರ್ಗ ತಾಲೂಕು ಜಾಲಹಳ್ಳಿಯಲ್ಲಿ ಸಾರ್ವಜನಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಿಸಲಾಯಿತು.  
ಜಿಲ್ಲೆ

ಆಯುಷ್ಮಾನ್ ಕಾರ್ಡ್‌ನಿಂದ ಚಿಕಿತ್ಸೆಗೆ ಅನುಕೂಲ

ಶಶಿಧರ ಎಲ್

ದೇವದುರ್ಗ: ವಿಮುಕ್ತ ದೇವಾದಾಸಿಯರು ಉತ್ತಮ ಆರೋಗ್ಯ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸ್ವಾಭಿಮಾನಿ ಜೀವನ ನಡೆಸಬೇಕು ಎಂದು ದೇವದಾಸಿ ಪುನರ್ವಸತಿ ಯೋಜನೆಯ ಜಿಲ್ಲಾ ಸಂಯೋಜಕಿ ಭಾರತಿ ನಾಯಕ ಹೇಳಿದರು.

ಜಾಲಹಳ್ಳಿಯಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ ಸಮಾರಂಭದಲ್ಲಿ ಶುಕ್ರವಾರ ಮಾತನಾಡಿದರು. ಆಯುಷ್ಮಾನ್ ಕಾರ್ಡ್ ಮಾಡಿಸಿದರೆ ಕುಟುಂಬದ ಸದಸ್ಯರಿಗೆ ಯಾವುದೇ ಕಾಯಿಲೆ ಬಂದರೂ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ. 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿವರೆಗೆ ಉಚಿತ ಆರೋಗ್ಯ ಸೇವೆ ಪಡೆಯಬಹುದು ಎಂದು ಹೇಳಿದರು.