filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; motionR: null; delta:null; bokeh:0; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (0, 0);aec_lux: 94.0;aec_lux_index: 0;albedo: ;confidence: ;motionLevel: 0;weatherinfo: weather?null, icon:null, weatherInfo:100;temperature: 43; 
ಜಿಲ್ಲೆ

ದೈಹಿಕ- ಮಾನಸಿಕ ವಿಕಾಸಕ್ಕೆ ಕ್ರೀಡೆ ಪೂರಕ

Davangere - Desk - Shobha Krishna Gowda

ಜಗಳೂರು: ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಪೂರಕವಾಗಿವೆ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪ್ರಾಥಮಿಕ/ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯದ ಜತೆಗೆ ಸಕ್ರಿಯವಾಗಿ ಎಲ್ಲ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಮಕ್ಕಳಲ್ಲಿ ಅನೇಕ ಪ್ರತಿಭೆ ಇರುತ್ತದೆ. ಅದನ್ನು ಹೊರ ಹಾಕುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು.

ಕ್ರೀಡಾಕೂಟಕ್ಕೆ ಬಂದ ವಿದ್ಯಾರ್ಥಿಗಳನ್ನು ಶಿಕ್ಷಕರು ಸುರಕ್ಷಿತವಾಗಿ ಮನೆಗೆ ತಲುಪಿಸಬೇಕು. ಯಾವುದೇ ಸಮಸ್ಯೆಯಾದರೂ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ವೈಯಕ್ತಿಕ ಮತ್ತು ಗುಂಪು ಕ್ರೀಡೆಗಳಲ್ಲಿ ಭಾಗವಹಿಸಿ ಪಾಲಕರಿಗೆ, ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತರುವ ಸಾಧನೆ ಮಾಡಬೇಕು. ಎರಡು ದಿನದ ಕ್ರೀಡಾಕೂಟದ ಸ್ಪರ್ಧಾರ್ಥಿಗಳಿಗೆ 50 ಸಾವಿರ ರೂ. ನೀಡುತ್ತಿದ್ದೇನೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

ತಾಲೂಕು ಕ್ರೀಡಾಂಗಣದ ಅಭಿವೃದ್ಧಿಗೆ ಯುವಜನ ಮತ್ತು ಕ್ರೀಡಾ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಗುಣಮಟ್ಟದ ಮಾದರಿ ಕ್ರೀಡಾಂಗಣಕ್ಕೆ ನೀಲಿನಕ್ಷೆ ಸಿದ್ಧಪಡಿಸಿ ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಬಿಇಒ ಹಾಲಮೂರ್ತಿ ಮಾತನಾಡಿ, ವಲಯ ಮಟ್ಟ ಮುಗಿದು ತಾಲೂಕು ಮಟ್ಟಕ್ಕೆ ವಿದ್ಯಾರ್ಥಿಗಳು ಬಂದಿದ್ದಾರೆ. ರಾಜ್ಯಮಟ್ಟಕ್ಕೆ ಹೋಗುವ ವಿದ್ಯಾರ್ಥಿಗಳಿದ್ದಾರೆ. ಹಾಗಾಗಿ ತೀರ್ಪದಾರರು ಏಕಪಕ್ಷೀಯವಾಗಿ ಅಥವಾ ಗೊಂದಲದಿಂದ ತೀರ್ಪು ನೀಡಬೇಡಿ ಎಂದು ಸಲಹೆ ನೀಡಿದರು.

ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಡಿ.ಡಿ. ಹಾಲಪ್ಪ, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಎಚ್.ಆರ್. ಸಿದ್ದಲಿಂಗಪ್ಪ, ಎಚ್.ಎಸ್. ಶಿವಮ್ಮ, ಕುಮಾರನಾಯ್ಕ, ರಾಜಯ್ಯ, ಪ್ರಕಾಶ್ ತೋಟಗಂಟಿ, ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಜಿ. ವೆಂಕಟೇಶ್, ಕೆ.ಟಿ. ಚಿಕ್ಕಣ್ಣ, ಎಚ್. ಹನುಮಂತಪ್ಪ, ಗೋವಿಂದಪ್ಪ, ವಿಶ್ವನಾಥ್, ಆಂಜನೇಯ ನಾಯ್್ಕ ಬಿ.ಎಂ. ಹನುಮಂತೇಶ್, ದೈಹಿಕ ಪರಿವೀಕ್ಷಕ ವಿ. ರಾಜಣ್ಣ, ವಿ. ಮಂಜಣ್ಣ ಮತ್ತಿತರರಿದ್ದರು.