ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಶಾಸಕ ನಾರಾ ಭರತ್ ರೆಡ್ಡಿ, ಪಾಲಿಕೆ ಆಯುಕ್ತ ಜಿ.ಖಲೀಲ್‌ಸಾಬ್ ಹೂಗುಚ್ಛ ನೀಡಿ ಹಾರೈಸಿದರು.  
ಜಿಲ್ಲೆ

ಬಳ್ಳಾರಿ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ

ಬಳ್ಳಾರಿ : ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ದಾಖಲಾತಿಯಲ್ಲಿ ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಪಾಲಿಕೆ ಆಯುಕ್ತ ಜಿ.ಖಲೀಲ್‌ಸಾಬ್ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಈ ವೇಳೆ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.