ಜಿಲ್ಲೆ

VIDEO| ಲಾಕ್​ಡೌನ್​ ನಡುವೆಯೂ ಆರೋಗ್ಯ ಸಚಿವರಿಗೆ ಅದ್ಧೂರಿ ಸ್ವಾಗತ: ಸಾಮಾಜಿಕ ಅಂತರವೇ ಮಾಯ!

ಚಿತ್ರದುರ್ಗ: ಕರೊನಾ ಲಾಕ್​ಡೌನ್ ನಡುವೆಯೂ ಯಾವುದೇ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಆರೋಗ್ಯ ಸಚಿವ ಬಿ. ಶ್ರೀರಾಮುಲುಗೆ ಚಳ್ಳಕೆರೆ ತಾಲೂಕಿನ ಪರಶುರಾಮಪುರ ಗ್ರಾಮದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

ಮೆರವಣಿಗೆಯಲ್ಲಿ ಸಚಿವರಿಗೆ ಬೃಹತ್ ಸೇಬಿನ ಹಾರದ ಜತೆಗೆ ಅಭಿಮಾನಿಗಳು ಹೂ ಮಳೆಗರೆದು ಎತ್ತಿನ ಗಾಡಿಯಲ್ಲಿ ಗ್ರಾಮಕ್ಕೆ ಬರಮಾಡಿಕೊಂಡರು. ಈ ವೇಳೆ ಸಂಸದರಾದ ಎ.ನಾರಾಯಣ ಸ್ವಾಮಿ ಹಾಗೂ ಜಿ.ಎಚ್.ತಿಪ್ಪಾರೆಡ್ಡಿ ಸಹ ಭಾಗಿಯಾಗಿದ್ದರು.

ವೇದಾವತಿ ನದಿಗೆ ಬಾಗಿನ ಅರ್ಪಿಸಲು ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಆಗಮಿಸಿದ್ದರು. ಆದರೆ, ಸ್ವಾಗತ ಕಾರ್ಯಕ್ರಮದಲ್ಲಿ ಎಲ್ಲೂ ಸಾಮಾಜಿಕ ಅಂತರ ಕಾಣಲಿಲ್ಲ. ಸ್ವತಃ ಸಚಿವರೇ ಅಂತರ ಕಾಯ್ದುಕೊಳ್ಳುವುದನ್ನು ಮರೆತರು. ಅವರ ಸುತ್ತಲೂ ನೂರಾರು ಜನ ಜಮಾವಣೆಗೊಂಡಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರ ಹರ ಸಾಹಸಪಟ್ಟರು. (ದಿಗ್ವಿಜಯ ನ್ಯೂಸ್​)