ಮಣ್ಣೂರು ಗ್ರಾಮದಲ್ಲಿ ಅಂಬೇಡ್ಕರ್‌ರ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು. ಪ್ರಮುಖರಾದ ಹನುಮಂತ, ಚಂದ್ರಶೇಖರ್, ಶಿವಪ್ಪ, ಸಣ್ಣ ಭೋಜ ಇದ್ದರು. 
ಜಿಲ್ಲೆ

ಪ್ರಾಮಾಣಿತೆಯಿಂದ ಬದಲಾವಣೆ ಸಾಧ್ಯ

ಪ್ರವೀಣ ಉದುಸಾ ದಲಬಂಜನ್

ಕುರುಗೋಡು: ಬಾಬಾ ಸಾಹೇಬರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮುಂದೆ ಬರಲು ಸಾಧ್ಯ ಎಂದು ದಲಿತ ಸಂಘರ್ಷ ಸಮಿತಿಯ ಖಜಾಂಚಿ ವಸಂತ ಕುಮಾರ್ ಹೇಳಿದರು.

ಬಾಬಾ ಸಾಹೇಬರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಸಮೀಪದ ಮಣ್ಣೂರು ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್‌ರ ಮಹಾಪರಿನಿರ್ವಾಣ ಅಂಗವಾಗಿ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿ ಮಾತನಾಡಿದರು. ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸಿದಾಗ ಸಮಾಜದಲ್ಲಿ ಗೌರವ ಸಿಗಲಿದೆ. ದಲಿತರಿಗೆ ದಲಿತರೇ ಶತ್ರುಗಳಾಗಬಾರದು. ಕಾಲೆಳೆಯುವುದನ್ನು ಬಿಡಬೇಕು. ಜಾತಿ ಮುಖ್ಯವಲ್ಲ, ಸಂಘಟನೆ ಮುಖ್ಯವಾಗಬೇಕಾಗಿದೆ. ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದಾಗ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು. ಪ್ರಮುಖರಾದ ಹನುಮಂತ, ವಿನೋದ್ ಇನ್ನಿತರರಿದ್ದರು.