ಜಿಲ್ಲೆ

ಉತ್ತಮ ಆಡಳಿತ ಸೇವೆಗೆ ಜಗಜೀವನ್ ರಾಂ ಪ್ರೇರಣೆ: ಜಿಲ್ಲಾಧಿಕಾರಿ

ಗೋಪಾಲಕೃಷ್ಣ ಪಾದೂರ್

ಉಡುಪಿ: ಡಾ.ಬಾಬು ಜಗಜೀವನ್ ರಾಂ ಅವರಿಂದ ಪ್ರೇರಣೆ ಪಡೆದು ಆಡಳಿತದಲ್ಲಿ ಉತ್ತಮ ಸೇವೆಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು.

ಬುಧವಾರ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿ ಆಶ್ರಯದಲ್ಲಿ ನಡೆದ ಡಾ.ಬಾಬು ಜಗಜೀವನ್ ರಾಂ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಬಾಬು ಜಗಜೀವನ್ ರಾಂ ಅವರು ಬಾಬುಜೀ ಎಂಬ ನಾಮಧೇಯದಿಂದ ಖ್ಯಾತರು. ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಬಾಬುಜೀಯವರು ರಕ್ಷಣಾ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಯುದ್ಧದಲ್ಲಿ ವಿಜಯ ಸಾಧಿಸಿ ದೇಶಕ್ಕೆ ರಕ್ಷಣೆ ಒದಗಿಸಿದ್ದರು. ಹಸಿರು ಕ್ರಾಂತಿಗೆ ತಮ್ಮದೇ ಆದ ಪ್ರಾಮುಖ್ಯತೆ ನೀಡಿದವರು. ಹಸಿರು ಕ್ರಾಂತಿಯ ಹರಿಕಾರ ಎಂದೇ ಅವರನ್ನು ಕರೆಯಲಾಗುತ್ತದೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡಿ ಪೂರ್ಣಿಮಾ ಉಪಸ್ಥಿತರಿದ್ದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಶ್ರೀದೇವಿ ನಿರೂಪಿಸಿ, ವಂದಿಸಿದರು.