ಜಿಲ್ಲೆ

ಬಾಬು ಜಗಜೀವನ ರಾಂ ಜಯಂತಿ 5ರಂದು

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹು-ಧಾ ಮಹಾನಗರ ಪಾಲಿಕೆ ಆಶ್ರಯದಲ್ಲಿ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಜಯಂತಿಯನ್ನು ಏ. 5ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲ್ಲಿ ಆಯೋಜಿಸಲಾಗಿದೆ.

ಶ್ರೀ ಸಿದ್ದ ಬಸವ ಕಬೀರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅಬ್ಬಯ್ಯ ಪ್ರಸಾದ, ಮಹೇಶ ಟೆಂಗಿನಕಾಯಿ, ಎಂ.ಆರ್​.ಪಾಟೀಲ್​, ಎನ್​.ಎಚ್​ ಕೋನರಡ್ಡಿ, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ, ನಿಗಮ ಮಂಡಳಿ ಅಧ್ಯಕ್ಷರು, ಇತರರು ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.

ಸಹಾಯಕ ಪ್ರಾಧ್ಯಾಪಕಿ ಪ್ರೊ. ಪವಿತ್ರಾ ಪ್ರಧಾನ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.