ವಿಜಯಪುರ: ದೇಶದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರು ಜಾತಿ ವ್ಯವಸ್ಥೆ ಹೋಗಲಾಡಿಸಿ ಸಮಸಮಾಜ ನಿರ್ಮಿಸಲು ಶ್ರಮಿಸಿದ ಮಹಾನ್ ಚಿಂತಕ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನಗರದ ಬಂಜಾರ ವತ್ತದ ಬಳಿಯ ಡಾ. ಬಾಬು ಜಗಜೀವನರಾಮ್ ಭವನದಲ್ಲಿ ಜಿಲ್ಲಾಡಳಿತ, ಜಿ.ಪಂ., ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಮ್ ಅವರ 118ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಅವರು ಶೋಷಿತ ವರ್ಗ, ಹಿಂದುಳಿದ ವರ್ಗಗಳ ಬದುಕು ಹಸನಾಗಿಸಿ, ಸಮ ಸಮಾಜ ನಿರ್ಮಿಸಲು ಕಂಡ ಕನಸು ನನಸಾಗಿಸಲು ನಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳುವ ಅವಶ್ಯಕತೆ ಇದೆ.
ದಾಗಲೇ ಸಮಾಜಗಳಲ್ಲಿ ಬದಲಾವಣೆ ಕಾಣಲು ಸಾಧ್ಯ. ಜಗಜೀವನರಾಮ್ ಅವರು ಕೃಷಿ ೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ನಡೆಸಿ ಕೃಷಿ ಪದ್ಧತಿಗಳಲ್ಲಿ ಅಧುನಿಕತೆ ಬಳಸಿ ಕೃಷಿ ಉತ್ಪನ್ನಗಳ ಉತ್ಪಾದನೆ ಹೆಚ್ಚಿಸುವ ಜತೆಗೆ ದೇಶದ ಆಹಾರ ಭದ್ರತೆಗೆ ನಾಂದಿ ಹಾಡಿ ಹಸಿರು ಕ್ರಾಂತಿಯ ಹರಿಕಾರ ಎಂದು ಪ್ರಸಿದ್ಧಿ ಪಡೆದವರು ಎಂದರು.
ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದುಳಿದ ವರ್ಗಗಳ ಸಮಸ್ಯೆ, ಅನ್ಯಾಯಗಳ ವಿರುದ್ಧ ಹಾಗೂ ಸಮ ಸಮಾಜಕ್ಕಾಗಿ ಹೋರಾಡಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಮ್ ಅವರು ನಮ್ಮ ದೇಶದ ಎರಡು ಕಣ್ಣುಗಳು ಎಂದು ತಿಳಿಸಿದರು.
ಜಿ.ಪಂ. ಸಿಇಒ ರಿಷಿ ಆನಂದ ಮಾತನಾಡಿ, ಡಾ. ಬಾಬು ಜಗಜೀವನರಾಮ್ ಅವರು ದೇಶದ ಒಬ್ಬ ಮಹಾನ್ ನಾಯಕ. ದೇಶದ ಸ್ವಾತಂತ್ರ ಹೋರಾಟದಲ್ಲಿ ಮಹಾತ್ಮ ಗಾಂಧೀಜಿಯವರೊಂದಿಗೆ ಭಾಗವಹಿಸಿದ್ದರು. ದೇಶದ ಪ್ರಥಮ ಉಪ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದರು. ಅಂತಹ ಮಹನೀಯರ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ$್ಮಣ ನಿಂಬರಗಿ ಮಾತನಾಡಿದರು. ಅಕ್ಕಮಹಾದೇವಿ ಮಹಿಳಾ ವಿವಿ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿತರಣಾ ಕೇಂದ್ರದ ಮುಖ್ಯಸ್ಥೆ, ನಿರ್ದೇಶಕಿ ಪ್ರೊ. ಲಕ್ಷಿ$್ಮದೇವಿ ವೈ., ಉಪನ್ಯಾಸ ನೀಡಿದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಸತಿ ನಿಲಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂವಿಧಾನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಜಿ.ಪಂ. ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಮತ್ತಿತರರಿದ್ದರು.
ಇದಕ್ಕೂ ಮುನ್ನ ನಗರದ ಸೆಟ್ಲೈಟ್ ಬಸ್ ನಿಲ್ದಾಣದ ಬಳಿಯ ಡಾ. ಬಾಬು ಜಗಜೀವನರಾಮ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು. ಎಡಿಸಿ ಸೋಮಲಿಂಗ ಗೆಣ್ಣೂರ, ಜಿ.ಪಂ. ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ, ಕ.ಕ.ರ.ಸಾ. ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಮತ್ತಿತರರಿದ್ದರು.