ರಾಮದುರ್ಗ: ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ ಜಯಂತಿಯನ್ನು ಏ.5ರಂದು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಏ.14 ರಂದು ತಾಲೂಕಾಡಳಿತ ಹಾಗೂ ವಿವಿಧ ದಲಿತ ಸಂಟನೆಗಳ ನೇತತ್ವದಲ್ಲಿ ಆಚರಣೆ ಮಾಡಲು ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ರ್ನಿಣಯಿಸಲಾಯಿತು.
ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಹಾಗೂ ಜಗಜೀವನ್ ರಾಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಂತಿ ಆಚರಣೆ ಮಾಡಿದ ನಂತರ ತಹಸೀಲ್ದಾರ್ ಕಾರ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಸೂಚಿಸಿದರು.
ಅಂಬೇಡ್ಕರ್ ಜಯಂತಿಯಂದು ಅವರ ಭಾವಚಿತ್ರದ ಮೆರವಣಿಗೆ, ನಂತರ ಪುರಸಭೆ ಸಾಂಸತಿಕ ಭವನದಲ್ಲಿ ಪ್ರತಿವರ್ಷದಂತೆ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ವಿವಿಧ ೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸತ್ಕಾರ ಹಾಗೂ ಉಪನ್ಯಾಸ ಜರುಗಲಿದೆ. ಎಲ್ಲರೂ ಕಾರ್ಯಕ್ರಮ ಯಶಸ್ಸಿಗಾಗಿ ಶ್ರಮಿಸಬೇಕು ಎಂದು ತಿಳಿಸಿದರು.
ತಾಪಂ ಇಒ ಬಸವರಾಜ ಐನಾಪುರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ದಲಿತ ಸಂಟನೆಗಳ ಮುಖಂಡರಿದ್ದರು.