ಹಾವೇರಿ: ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಅವರ 114ನೇ ಜನ್ಮ ದಿನವನ್ನು ಜಿಲ್ಲಾಡಳಿತ ಹಾಗೂ ಸಮಾಜಕಲ್ಯಾಣ ಇಲಾಖೆಯಿಂದ ಸರಳವಾಗಿ ಆಚರಿಸಲಾಯಿತು.
ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಡಾ. ಬಾಬೂಜಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿ ಮಾತನಾಡಿ, ಬಾಬೂಜಿ ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.
ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಪಂ ಸಿಇಒ ಮಹಮ್ಮದ್ ರೋಷನ್, ಸಮಾಜಕಲ್ಯಾಣಾಧಿಕಾರಿ ಜಗದೀಶ ಹೆಬ್ಬಳ್ಳಿ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಎಚ್.ಎ. ಜಮಾಖಾನೆ, ಡಿಡಿಪಿಐ ಅಂದಾನೆಪ್ಪ ವಡಗೇರಿ, ಜಗದೀಶ ಬೆಟಗೇರಿ, ಹೊನ್ನಪ್ಪ ತಗಡಿನಮನಿ, ಸಂಜಯಗಾಂಧಿ ಸಂಜೀವಣ್ಣವರ ಇತರರಿದ್ದರು.