ಮಾನ್ವಿಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ತಹಸೀಲ್ದಾರ್ ರಾಜು ಫಿರಂಗಿ, ಗ್ರೇಡ್-2 ತಹಸೀಲ್ದಾರ್ ಅಬ್ದುಲ್ ವಾಹಿದ್, ಪುರಸಭೆ ಸದಸ್ಯ ರಾಜಾ ಮಹೇಂದ್ರನಾಯಕ, ಶಿವರಾಜ ನಾಯಕ ವಕೀಲ ಇತರರಿದ್ದರು. 
ಜಿಲ್ಲೆ

ಹಿಂದುಳಿದವರ ಕಲ್ಯಾಣಕ್ಕಾಗಿ ಶ್ರಮ

ಅಶೋಕ್ ಕುಮಾರ್ ಎನ್

ಮಾನ್ವಿ: ಹಿಂದುಳಿದ ವರ್ಗಗಳ ಬಡವರ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಂಡು ನ್ಯಾಯಕೊಡಿಸಿದ ಮಹಾನ್ ಪುರುಷ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಆಗಿದ್ದು, ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ತಹಸೀಲ್ದಾರ್ ರಾಜು ಫಿರಂಗಿ ಹೇಳಿದರು.

ಪಟ್ಟಣದ ಟೌನ್‌ಹಾಲ್‌ನಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಭಾನುವಾರ ಮಾತನಾಡಿದರು.

ಅರಸು ಆಡಳಿತ ಅವಧಿಯಲ್ಲಿ ರಾಜ್ಯದ ಬಡ ಜನರು ಹಾಗೂ ಹಿಂದುಳಿದವರ ಕಲ್ಯಾಣಕ್ಕಾಗಿ ಹಾಕಿಕೊಂಡ ಕಾರ್ಯಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. ಉಪನ್ಯಾಸಕ ಸುರೇಶ ಕುಮಾರ ಉಪನ್ಯಾಸ ನೀಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಪಟ್ಟಣದ ಬಸವ ವೃತ್ತದಿಂದ ಟೌನ್‌ಹಾಲ್‌ವರೆಗೆ ಡಿ.ದೇವರಾಜು ಅರಸು ಭಾವಚಿತ್ರವನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಲಾಯಿತು.
ಬಿಸಿಎಂ ಇಲಾಖೆಯ ತಾಲೂಕು ಅಧಿಕಾರಿ ನೀಲಮ್ಮ, ಟಿಎಪಿಸಿಎಂಸಿ ಅಧ್ಯಕ್ಷ ತಿಮ್ಮರೆಡ್ಡಿ ಭೋಗಾವತಿ, ಪುರಸಭೆ ಸ್ಥಾಯಿ ಸಮಿತಿ
ಅಧ್ಯಕ್ಷ ವೆಂಕಟೇಶ ನಾಯಕ ಇದ್ದರು.