ಬೆಳ್ತಂಗಡಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ನೆಮ್ಮದಿ ಪಡೆದುಕೊಳ್ಳಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ನಾರಾಯಣ ಗೌಡ ಹೇಳಿದರು.
ಕಾಲೇಜಿನ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕುಮಟ್ಟದ ಬಾಡ್ಮಿಂಟನ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ವಾಣಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕು ಕ್ರೀಡಾ ಸಂಯೋಜಕ ಸಂದೀಪ್ ಕುಮಾರ್, ವಾಣಿ ಶಿಕ್ಷಣ ಸಂಸ್ಥೆ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ., ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ಕೆ. ಉಪಸಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಉಪನ್ಯಾಸಕಿ ಕಾಮಾಕ್ಷಿ ನಿರೂಪಿಸಿದರು. ಸುಧೀರ್ ಕೆ.ಎನ್. ವಂದಿಸಿದರು.