ಜಿಲ್ಲೆ

ಅಪ್ರಾಪ್ತೆ ಜತೆಗಿನ ಅಶ್ಲೀಲ ಫೋಟೋ ವೈರಲ್ ಮಾಡಿದ ದುರುಳರು

ಬಾಗಲಕೋಟೆ: ಅಪ್ರಾಪ್ತೆಯನ್ನು ಒತ್ತಾಯದಿಂದ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವುದು ಇಳಕಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಪೋಷಕರು ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಇನ್ನಿಬ್ಬರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇಳಕಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಇತ್ತೀಚೆಗೆ ಘಟನೆ ನಡೆದಿದೆ. ಬಾಲಕಿಯ ತಂದೆ ಬೆಂಗಳೂರಿಗೆ ಹೋಗಿದ್ದ ವೇಳೆ ಆರೋಪಿಯೊಬ್ಬ 13 ವರ್ಷದ ಬಾಲಕಿಯನ್ನು ಗ್ರಾಮದ ದೇವಸ್ಥಾನದ ಹಿಂದುಗಡೆ ಕರೆದುಕೊಂಡು ಹೋಗಿ ಅವಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ಈ ವೇಳೆ ಅದನ್ನು ಫೋಟೋ ತೆಗೆದು ದುರುಳರು ವಾಟ್ಸಆ್ಯಪ್ ಗ್ರೂಪ್‌ನಲ್ಲಿ ಹರಿಬಿಟ್ಟಿದ್ದಾರೆ.

ಘಟನೆಯಿಂದ ಕಂಗಾಲಾಗಿದ್ದ ಬಾಲಕಿ ಮನೆಯಲ್ಲಿ ಯಾರೊಂದಿಗೂ ಮಾತನಾಡದೆ ಮೌನವಾಗಿದ್ದಳು. ಮನೆಯವರು ವಿಚಾರಿಸಿದರೂ ಆರೋಗ್ಯ ಸರಿಯಿಲ್ಲ ಎಂದು ಹೇಳಿದ್ದಳು. ವಾಟ್ಸಆ್ಯಪ್ ಗ್ರೂಪ್‌ನಲ್ಲಿ ಅಶ್ಲೀಲ ಫೋಟೋ ಹರಿದಾಡುತ್ತಿರುವುದು ಗಮನಕ್ಕೆ ಬಂದ ಮೇಲೆ ಬಾಲಕಿ ಪೋಷಕರು ಇಳಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದು ಬಂಧಿತ ಇಬ್ಬರು ಆರೋಪಿಗಳ ಪೈಕಿ ಒಬ್ಬ ಅಪ್ರಾಪ್ತ ಇದ್ದಾನೆ ಎಂದು ತಿಳಿದು ಬಂದಿದೆ.

EndFragment