ಜಿಲ್ಲೆ

ಪ್ರವಾಸಿ ತಾಣಗಳಿಗೆ ಕೆಎಸ್‌ಟಿಡಿಸಿ ಅಧ್ಯಕ್ಷೆ ಶ್ರುತಿ ಭೇಟಿ

ಬಾಗಲಕೋಟೆ: ಜಿಲ್ಲೆಯ ಪ್ರವಾಸಿ ತಾಣಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲು ಹಾಗೂ ಮಹಾಕೂಟಕ್ಕೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ, ನಟಿ ಶ್ರುತಿ ಶನಿವಾರ ಭೇಟಿ ನೀಡಿ, ಪರಿಶೀಲಿಸಿದರು.

ಬಾದಾಮಿಯ ಗುಹಾಂತರ ದೇವಾಲಯಗಳಿಗೆ ಭೇಟಿ ನೀಡಿ, ಸ್ಥಳಾಂತರಗೊಳ್ಳಬೇಕಾದ ಮನೆ ಹಾಗೂ ಅದಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಗೊಂಡ ಕಾರ್ಯ, ಹಾಕಿಕೊಂಡ ಕ್ರಿಯಾ ಯೋಜನೆಗಳ ಬಗ್ಗೆ ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಅನಿಕುಮಾರ ಅವರಿಂದ ಮಾಹಿತಿ ಪಡೆದರು. ಪಟ್ಟದಕಲ್ಲು ಮತ್ತು ಐಹೊಳೆ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಮನೆಗಳ ಸ್ಥಳಾಂತರ ಬಗ್ಗೆ ಮಾಹಿತಿ ಪಡೆದರು.

ಬೆಂಗಳೂರಿನ ಸೌಂಡ್ ಲೈಟ್ ಸಿಸ್ಟಮ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣಕುಮಾರ, ಕೆಎಸ್‌ಟಿಡಿಸಿಯ ಎಜಿಎಂ ಎಸ್.ಬಿ.ದೇಶಮುಖ, ರಾಕ್ ಕ್ಲೈಂಬಿಂಗ್ ಗಣೇಶ ವಡ್ಡರ ಇತರರು ಇದ್ದರು.