ಜಿಲ್ಲೆ

ಅಪಘಾತದಲ್ಲಿ ಯುವಕ ಸಾವು

Bagalkot

ಬಾಗಲಕೋಟೆ: ನವನಗರದ ಸೆಕ್ಟರ್ ನಂಬರ್ 6 ರಲ್ಲಿ ಗುರುವಾರ ಬೈಕ್ ಮತ್ತು ಟ್ರಾೃಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕ ಮೃತಪಟ್ಟಿದ್ದಾನೆ.

ನವನಗರದ ಸೆಕ್ಟರ್ ನಂಬರ್ 8 ನಿವಾಸಿ ವಿಶಾಲ ಅಂಬಿಗೇರ (18) ಮೃತ ದುರ್ದೈವಿ. ಬೈಕ್‌ನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದಾಗ ಆಕಸ್ಮಿಕವಾಗಿ ಟ್ರಾೃಕ್ಟರ್‌ಗೆ ಗುದ್ದಿಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದನು. ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾನೆ.

ಅಪಘಾತದ ರಭಸಕ್ಕೆ ಟ್ರಾೃಕ್ಟರ್ ಟ್ರೇಲರ್ ಪಲ್ಟಿ ಹೊಡೆದಿದೆ. ಅದರಲ್ಲಿ ಕುಳಿತಿದ್ದ ಮೂವರು ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ. ಅವರಿಗೆ ಯಾವುದೇ ಪ್ರಾಣಾಪಾಯ ಇಲ್ಲ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಬಾಗಲಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

EndFragment