ಜಿಲ್ಲೆ

1 ಹೊಸ ಪ್ರಕರಣ ದೃಢ

Bagalkot

ಬಾಗಲಕೋಟೆ: ಜಿಲ್ಲೆಯಲ್ಲಿ 5 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 1 ಕೋವಿಡ್ ಪ್ರಕರಣ ಶುಕ್ರವಾರ ದೃಢಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13765 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13620 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1264 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 349469 ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 333876 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ ಎಂದು ತಿಳಿಸಿದ್ದಾರೆ.