ಜಿಲ್ಲೆ

275 ಹೊಸ ಪ್ರಕರಣ ದೃಢ

ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ 885 ಜನ ಗುಣಮುಖರಾಗಿದ್ದು, ಹೊಸದಾಗಿ 275 ಕೋವಿಡ್ ದೃಢಪಟ್ಟಿದ್ದು, ಚಿಕಿತ್ಸೆ ಫಲಕಾರಿಯಾಗದೇ ಓರ್ವ ಸೋಂಕಿತ ಗುರುವಾರ ಮೃತಪಟ್ಟಿದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 30703 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 25221 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 119, ಬಾದಾಮಿ 36, ಜಮಖಂಡಿ 35, ಹುನಗುಂದ 39, ಮುಧೋಳ 33, ಬೀಳಗಿ 13 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1633 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 603976 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 571040 ನೆಗಟಿವ್ ಪ್ರಕರಣ, ಹಾಗೂ 248 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 5234 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.