ಜಿಲ್ಲೆ

ಕೋವಿಡ್‌ಗೆ ಮತ್ತೊಂದು ಬಲಿ

ಬಾಗಲಕೋಟೆ: ಮಹಾಮಾರಿ ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಹೊಸದಾಗಿ 17 ಪ್ರಕರಣಗಳು ದೃಢಪಟ್ಟಿವೆ. 7 ಜನ ಗುಣಮುಖರಾಗಿ ಸೋಮವಾರ ನಿಗದಿತ ಆಸ್ಪತ್ರೆ ಮತ್ತು ಸಿಸಿ ಕೇಂದ್ರಗಳಿಂದ ಬಿಡುಗಡೆ ಹೊಂದಿದ್ದಾರೆ.

ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 5, ಬಾದಾಮಿ 3, ಮುಧೋಳ 2, ಹುನಗುಂದ 3, ಬೀಳಗಿ 1, ಜಮಖಂಡಿ 3 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13462 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13196 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 614 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 183220 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 168633 ನೆಗಟಿವ್ ಪ್ರಕರಣ ಹಾಗೂ 133 ಮೃತ ಪ್ರಕರಣ ವರದಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

EndFragment