ಜಿಲ್ಲೆ

ಡಿಸಿಎಂ ಕಾರಜೋಳ ಜಿಲ್ಲಾ ಪ್ರವಾಸ

ಬಾಗಲಕೋಟೆ: ಡಿಸಿಎಂ ಗೋವಿಂದ ಕಾರಜೋಳ ನ.1 ರಂದು ಬೆಳಗ್ಗೆ 8.50 ಗಂಟೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.

ನಂತರ 10.30 ಗಂಟೆಗೆ ಪಶುಸಂಗೋಪನ ಇಲಾಖೆಯ ಜಿಲ್ಲಾ ಪಶು ಆಸ್ಪತ್ರೆ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1ಗಂಟೆಗೆ ಬಾಗಲಕೋಟೆಯಿಂದ ಲೋಕಾಪುರಕ್ಕೆ ಆಗಮಿಸುವರು. ಲೋಕಾಪುರ ಹೋಬಳಿ ಅಡಿ ಬರುವ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಮತ್ತು ತಾಲೂಕು ಪಂಚಾಯಿತಿಯಿಂದ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಸಮಾರಂಭ, ಭೂಮಿ ಪೂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮುಧೋಳದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ನ.2 ರಂದು ಮುಧೋಳ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು, ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಧೋಳದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನ.3 ರಂದು ಬೆಳಗ್ಗೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.