ಜಿಲ್ಲೆ

ಕಾಮಗಾರಿ ವಿಳಂಬ ಮಾಡಿದರೆ ಕ್ರಮ

ಬಾಗಲಕೋಟೆ: ನವನಗರದ ಸೆಕ್ಟರ್ ನಂ.43ರಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಹಾಗೂ ವಸತಿ ನಿಲಯ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಬಿಟಿಡಿಎ ಅಧ್ಯಕ್ಷ ವೀರಣ್ಣ ಚರಂತಿಮಠ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬುಧವಾರ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಅವರು, 3 ಕೋಟಿ 10 ಲಕ್ಷ ರೂ. ವೆಚ್ಚದಲ್ಲಿ ಕಾಲೇಜು ಕಟ್ಟಡ ಹಾಗೂ 98 ಲಕ್ಷ ರೂ. ವೆಚ್ಚದಲ್ಲಿ 40 ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡ ಕಾಮಗಾರಿ 2013 ರಲ್ಲಿ ಆರಂಭಗೊಂಡರೂ ಇನ್ನು ಪೂರ್ಣಗೊಂಡಿಲ್ಲ. ಹೀಗಾದರೆ ವಿದ್ಯಾರ್ಥಿಗಳಿಗೆ ಅನುಕೂಲ ಯಾವಾಗ? ಕಾಮಗಾರಿ ವಿಳಂಬ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪ್ರಾಚಾರ್ಯ ಡಾ.ಅರುಣ್‌ಕುಮಾರ ಗಾಳಿ, ಕಾಲೇಜು ಉಸ್ತುವಾರಿ ಸಮಿತಿ ಸದಸ್ಯ ರಾಜು ರೇವಣಕರ ಉಪಸ್ಥಿತರಿದ್ದರು.