ಜಿಲ್ಲೆ

ಗ್ರಾಮ ಪಂಚಾಯಿತಿಗಳಿಗೆ ಚುನಾವಣೆಗೆ ತಡೆಯಾಜ್ಞೆ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಹಾವರಗಿ ಗ್ರಾಮ ಪಂಚಾಯಿತಿಯಿಂದ ಮನ್ಮಥನಾಳ ಗ್ರಾಮವನ್ನು ಬೇರ್ಪಡಿಸಿ ಬಿಂಜವಾಡಗಿ ಗ್ರಾಮ ಪಂಚಾಯಿತಿಗೆ ಸೇರ್ಪಡೆ ಮಾಡಿದ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶದ ವಿರುದ್ಧ ಹೈಕೋರ್ಟ್‌ದಿಂದ ತಡೆಯಾಜ್ಞೆ ಇರುವದರಿಂದ ಹುನಗುಂದ ತಾಲೂಕಿನ ಹಾವರಗಿ ಮತ್ತು ಬಿಂಜವಾಡಗಿ ಗ್ರಾಮ ಪಂಚಾಯಿತಿಗಳಿಗೆ ಜರುಗಬೇಕಾಗಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಪ್ರಸಕ್ತ ಚುನಾವಣಾ ಪ್ರಕ್ರಿಯೆಯಿಂದ ಕೈಬಿಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.