ಬಾಗಲಕೋಟೆ: ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳ ಜನ್ಮದಿನೋತ್ಸವ ಹಾಗೂ ರೈತ ದಿನಾಚರಣೆ ನಿಮಿತ್ತ ಂಚಮಸಾಲಿ ಸಮಾಜದ ಜಿಲ್ಲಾ ಯುವ ಘಟಕದಿಂದ ನಗರದ ಎಂ.ಪಿ. ನಾಡಗೌಡ ಬಡಾವಣೆಯ ಗುರುನೂರು ಆಸ್ಪತ್ರೆಯಲ್ಲಿ ಬುಧವಾರ ರಕ್ತದಾನ ಶಿಬಿರ ಜರುಗಿತು.
ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಸ್ಪಂದನೆ ಸಿಗದಿದ್ದರೇ ಬೀದಿಗಿಳಿದು ಉಗ್ರ ಸ್ವರೂಪದ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡಬೇಕು ಹಾಗೂ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಶಿಕ್ಷೃಣ, ಉದ್ಯೋಗದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ಸರ್ಕಾರ ನಮ್ಮ ಬೇಡಿಕೆ ಈಡೇರಿಸುವತ್ತ ಗಮನ ಹರಿಸಬೇಕು. ಇಲ್ಲವಾದಲ್ಲಿ 2021 ಜ. 14 ರಿಂದ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಆರಂಭಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು.
ನೇತಾಜಿ ಸುಭಾಸಚಂದ್ರ ಭೋಸ್ ನಿಮ್ಮ ರಕ್ತ ನನಗೆ ಕೊಡಿ, ನಾನು ನಿಮಗೆ ಸ್ವಾತಂತ್ರ್ಯವನ್ನು ಕೊಡಿಸುತ್ತೇನೆ ಎಂದು ಹೇಳಿದ್ದರು. ಇದೇ ಮಾದರಿಯಲ್ಲಿ ಸಮಾಜದ ಬಾಂಧವರು ರಕ್ತದಾನ ಮಾಡುವ ಮೂಲಕ ಮೀಸಲಾತಿಗಾಗಿ ಹೋರಾಟ ಆರಂಭಿಸಿದ್ದಾರೆ. ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ರಕ್ತದಾನ ಮಾಡಲಿದ್ದಾರೆ. ತನ್ಮೂಲಕ ಮೊದಲ ಹಂತದಲ್ಲಿ ಸರ್ಕಾರದ ಗಮನ ಸೆಳೆಯುವ ಉದ್ದೇಶ ಹೊಂದಲಾಗಿದೆ ಎಂದರು.
ಸಮಾಜದ ಸಹನೆಗೂ ಒಂದು ಮಿತಿ ಇದೆ, ಸಹನೆ ಮೀರಿದರೆ ಆಗುವ ಆವಾಂತರಗಳಿಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ. ಸಚಿವ ಸಿ.ಸಿ. ಪಾಟೀಲ ಮನವಿಗೆ ಸ್ಪಂದಿಸಿ ಡಿ.23 ರಿಂದ ಆರಂಭಗೊಳ್ಳಬೇಕಿದ್ದ ಹೋರಾಟವನ್ನು ಮುಂದೂಡಿ ಜ.14 ರಿಂದ ಪಾದಯಾತ್ರೆ ಆರಂಭಿಸುವ ಕುರಿತು ನಿರ್ಧರಿಸಲಾಗಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿಸಲು ಸಮಾಜದ ಪಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಯುವ ಘಟಕದ ರಾಜ್ಯಾಧ್ಯಕ್ಷೃ ಸೋಮಶೇಖರ ಅಲ್ಯಾಳ ಮಾತನಾಡಿ, ಮೀಸಲಾತಿ ಹೋರಾಟಕ್ಕೆ ರಾಜ್ಯದಲ್ಲಿ ಉತ್ತಮ ಬೆಂಬಲ ದೊರೆತಿದೆ. ಜಗದ್ಗುರುಗಳ ಜನ್ಮದಿನೋತ್ಸವ ಹಾಗೂ ರೈತ ದಿನಾಚರಣೆ ನಿಮಿತ್ತ ರಕ್ತದಾನ ಚಳವಳಿ ಮೂಲಕ ಸರ್ಕಾರಕ್ಕೆ ಸಂದೇಶ ನೀಡಿದ್ದೇವೆ ಎಂದರು. ರಕ್ತದಾನ ಶಿಬಿರದಲ್ಲಿ 50 ಕ್ಕೂ ಹೆಚ್ಚು ಯುವಕರು ರಕ್ತದಾನ ಮಾಡಿದರು. ಡಾ. ಎಸ್.ಎಂ. ಗೂರನವರ, ರಕ್ತನಿಧಿಯ ಶ್ರೀಧರ ಬಿ, ವಂದನಾ ಮುಧೋಳಕರ, ಸಮಾಜದ ಮುಖಂಡರಾದ ಡಾ.ಶಿವಕುಮಾರ ಗಂಗಾಲ, ಮಂಜುನಾಥ ಪುರಥಗೇರಿ, ವೀರೇಶ ಗಮದಾಳ, ಚನ್ನವೀರ ಅಂಗಡಿ, ಶಿವಾನಂದ ಯಾಳಗಿ, ಸಂಗಮೇಶ ದೊಡಮನಿ ಸೇರಿದಂತೆ ಇತರರು ಇದ್ದರು.
EndFragment