ಬಾಗಲಕೋಟೆ: ಬಾಳೆಹೂನ್ನೂರಿನ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ತಾಲೂಕಿನ ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ರುದ್ರಾಭಿಷೇಕ, ಮಹಾಪೂಜೆ ಸಲ್ಲಿಸಲಾಯಿತು.
ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಸ್ತೂರಿಮಠದ ಕರಿಬಸವೇಶ್ವರ ಶಿವಯೋಗಿ ಸ್ವಾಮೀಜಿ, ಗುಳೇದಗುಡ್ಡ ಅಮರೇಶ್ವರ ಮಠದ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಮರಡಿಮಠದ ಅಭಿನವ ಕಾಡಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಭಕ್ತರು ಜಗದ್ಗುರುಗಳು ಬೇಗನೆ ಗುಣಮುಖರಾಗಿ ಪೀಠಕ್ಕೆ ಬರಲಿ ಎಂದು ಆಶಿಸಿ ವೀರಭದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಪ್ರಾರ್ಥಿಸಿದರು.