ಬಾಗಲಕೋಟೆ ನವನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭಾನುವಾರ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. 
ಬಾಗಲಕೋಟೆ

ನೀಟ್ ಪರೀಕ್ಷೆಗೆ 109 ವಿದ್ಯಾರ್ಥಿಗಳು ಗೈರು

ಶಿಲ್ಪಾ ಪವಾರ

ಪ್ರಮುಖ ಮುಖ್ಯಾಂಶಗಳು

  • ನೀಟ್ ಪರೀಕ್ಷೆಗೆ 109 ವಿದ್ಯಾರ್ಥಿಗಳು ಗೈರು
  • ಒಟ್ಟು 3727 ವಿದ್ಯಾರ್ಥಿಗಳು ನೋಂದಣಿ
ಬಾಗಲಕೋಟೆ: ನಗರದ 10 ಕೇಂದ್ರಗಳಲ್ಲಿ ಭಾನುವಾರ ನಡೆದ ನೀಟ್ ಪರೀಕ್ಷೆಗೆ 109 ವಿದ್ಯಾರ್ಥಿಗಳು ಗೈರು ಉಳಿದಿದ್ದಾರೆ.
ನೀಟ್ ಪರೀಕ್ಷೆಗೆ ಒಟ್ಟು 3727 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 3618 ವಿದ್ಯಾರ್ಥಿಗಳು ಹಾಜರಾಗಿ 109 ವಿದ್ಯಾರ್ಥಿಗಳು ಗೈರು ಹಾಜರಾಗಿರುತ್ತಾರೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಪಾಟೀಲ ತಿಳಿಸಿದ್ದಾರೆ.

ಡಿಸಿ ಸಂಗಪ್ಪ ಭೇಟಿ

ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ಭಾನುವಾರ ಜಿಲ್ಲಾಧಿಕಾರಿ ಸಂಗಪ್ಪ ಅವರು ನವನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಭದ್ರತಾ ವ್ಯವಸ್ಥೆ, ಸಿಸಿಟಿವಿ ಅಳವಡಿಕೆ, ಪ್ರವೇಶ ನಿಯಂತ್ರಣ ಕ್ರಮಗಳು ಸೇರಿ ಅಗತ್ಯ ಸೌಲಭ್ಯಗಳನ್ನು ವೀಕ್ಷಣೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಸಿ.ಮನ್ನಿಕೇರಿ ಮತ್ತಿತರರಿದ್ದರು.