ಬಾಗಲಕೋಟೆ ಶಿವಾನಂದ ಜೀನ್‌ದಲ್ಲಿ ಬಿಜೆಪಿ ವತಿಯಿಂದ ಸಂತ ಸೇವಾಲಾಲ ಜಯಂತ್ಯುತ್ಸವ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಮೂಲಕ ಗೌರವ ನಮನಗಳನ್ನು ಸಲ್ಲಿಸಲಾಯಿತು. ಮಾಜಿ ಶಾಸಕ ವೀರಣ್ಣ ಚರಂತಿಮಠ, ಡಾ. ಎಂ.ಎಸ್. ದಡ್ಡೆನ್ನವರ, ನಗರಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಬಸವರಾಜ ಯಂಕಂಚಿ, ಶಿವಾನಂದ ಟವಳಿ ಇತರರಿದ್ದರು.
- ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭಿಮತ
- ಬಿಜೆಪಿ ಕಚೇರಿಯಲ್ಲಿ ಸಂತ ಸೇವಾಲಾಲ ಜಯಂತಿ ಆಚರಣೆ
- ಶಿಕ್ಷಣದ ಮಹತ್ವ ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನ ಪಡೆದು ಜಗತ್ತಿಗೆ ದಾರಿ ದೀಪವಾಗಿ
ಬಾಗಲಕೋಟೆ: ಶಿಕ್ಷಣದ ಮಹತ್ವ ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನ ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ತಮ್ಮ ತತ್ವಗಳ ಜ್ಞಾನದ ಮೂಲಕ ಸಮುದಾಯದಲ್ಲಿ ಸ್ವಾಭಿಮಾನ ಕಲಿಸಿದವರು ಸಂತ ಸೇವಾಲಾಲ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ನಗರದ ಶಿವಾನಂದ ಜೀನ್‌ನಲ್ಲಿ ಬಾಗಲಕೋಟೆ ಮತ ಕ್ಷೇತ್ರದ ಬಿಜೆಪಿ ವತಿಯಿಂದ ಭಾನುವಾರ ಹಮ್ಮಿಕೊಂಡ ಸಂತ ಸೇವಾಲಾಲ ಜಯಂತ್ಯುತ್ಸವ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಮೂಲಕ ಗೌರವ ನಮನಗಳನ್ನು ಸಲ್ಲಿಸಿ ಮಾತನಾಡಿದರು.
ಭರತ ಖಂಡದ ಧಾರ್ಮಿಕ ರಾಯಭಾರಿ ಎಂದೇ ಹೆಸರಾದ ಸಂತ ಸೇವಾಲಾಲ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು. ತಮ್ಮ ಲೀಲೆಗಳನ್ನು ಪ್ರದರ್ಶನ ಮಾಡುತ್ತ, ಜಗದಾಂಬೆಯ ಆರಾಧಕರಾಗಿ ಇಡೀ ಜೀವಮಾನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆಮಾಡಿದ ಸಂತ ಸೇವಾಲಾಲರು, ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ ಎಂದರು.
ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದರು. ಅಷ್ಟೇ ಅಲ್ಲದೆ ಶಿಕ್ಷಣದ ಮಹತ್ವ ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನ ಪಡೆದು ಜಗತ್ತಿಗೆ ದಾರಿ ದೀಪವಾಗಿ ಎಂದು ತಮ್ಮ ತತ್ವಗಳ ಮೂಲಕ ಲೋಕಕ್ಕೆ ಜ್ಞಾನದ ಮುಕ್ತಿ ಮಾರ್ಗ ತೋರಿಸಿದವರು. ಸರ್ವರನ್ನು ಒಳಗೊಂಡ ಸಮ ಸಮಾಜದ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆ ಮೂಡಲು ಪ್ರೇರೇಪಿಸಿದರು ಎಂದರು.
ಡಾ. ಎಂ.ಎಸ್. ದಡ್ಡೆನ್ನವರ, ನಗರಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಬಸವರಾಜ ಯಂಕಂಚಿ, ಶಿವಾನಂದ ಟವಳಿ, ಸತ್ಯನಾರಾಯಣ ಹೇಮಾದ್ರಿ, ಗುಂಡುರಾವ ಶಿಂಧೆ, ಅಂಬಾಜಿ ಜೋಷಿ, ಶಿವಾನಂದ ರಾಠೋಡ, ದಿಲೀಪ್ ರಾಠೋಡ, ಗಂಗಾರಾಮ ಚವಾಣ, ಗಣೇಶ ರಾಥೋಡ, ಹನಮಂತ ಚವಾಣ, ರಣಧೀರ ರಾಠೋಡ, ಸುರೇಶ ಲಮಾಣಿ, ಸುನೀಲ ಚವಾಣ, ಆನಂದ ಕೊಟಗಿ, ಗಿರೀಶ ಭಾಂಡಗೆ, ವೀರಣ್ಣ ಹಳೆಗೌಡರ, ಉಮೇಶ ಹಂಚಿನಾಳ ಸೇರಿ ಹಲವರಿದ್ದರು.