ಮುಧೋಳ ತಾಲೂಕಿನ ಬುದ್ದಿ ಪಿ.ಎಂ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 2005-06ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ವಿ.ಎಲ್. ಕೊಳ್ಳಾರ, ಬಿ.ಜಿ. ಹಿರೇಮಠ, ಎಚ್.ಆರ್. ಅರಕೇರಿ, ನಿವೃತ್ತ ಶಿಕ್ಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
- ಬುದ್ದಿ ಪಿಎಂ ಸರ್ಕಾರಿ ಶಾಲೆ
- ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ
ಮುಧೋಳ: ಗುರು-ಶಿಷ್ಯರ ನಡುವಿನ ಅವಿನಾಭಾವ ಸಂಬಂಧ ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ನಿವೃತ್ತ ಶಿಕ್ಷಕ ಪರಯ್ಯ ಗೋವಿಂದಪೂರಮಠ ಹೇಳಿದರು.
ತಾಲೂಕಿನ ಬುದ್ದಿ ಪಿ.ಎಂ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 2005-06ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯಾವಾಗಲೂ ಶಿಕ್ಷಕರು ತಮ್ಮ ಶಿಷ್ಯರು ತಮಿಗಿಂತ ಹೆಚ್ಚು ಸಾಧನೆ ಮಾಡಬೇಕು ಎಂದು ಬಯಸುತ್ತಾರೆ. ಯುವ ಪೀಳಿಗೆ ಪೋಷಕರು ಮತ್ತು ಶಿಕ್ಷಕರಿಗೆ ಗೌರವ ತೋರಬೇಕು ಎಂದು ಸಲಹೆ ನೀಡಿದರು.
ಗುರುವಂದನೆ ಸ್ವೀಕರಿಸಿದ ಡಾ. ಸಿದ್ದಣ್ಣ ಬಾಡಗಿ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳು ಗುರು-ಶಿಷ್ಯರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು. ಜತೆಗೆ, ಮಕ್ಕಳ ಮೇಲೆ ಮೊಬೈಲ್ ಬಳಕೆಯ ಪರಿಣಾಮದ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ವಿ.ಎಲ್. ಕೊಳ್ಳಾರ, ಬಿ.ಜಿ. ಹಿರೇಮಠ, ಎಚ್.ಆರ್. ಅರಕೇರಿ, ಐ.ಎಸ್. ಸವಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ರೇವಣಸಿದ್ದಯ್ಯ ಮರೆಗುದ್ದಿ ಸೇರಿ ಹಲವರು ಉಪಸ್ಥಿತರಿದ್ದರು.