ಇಳಕಲ್ಲ ಬಸವೇಶ್ವರ ವೃತ್ತಕ್ಕೆ ತೆರಳುವ ಪ್ರಮುಖ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಶಹರ ಠಾಣೆ ಪೊಲೀಸ್ ಸಿಬ್ಬಂದಿ  
ಬಾಗಲಕೋಟೆ

ಸುಗಮ ಸಂಚಾರಕ್ಕೆ ಪೊಲೀಸರಿಂದ ಕ್ರಮ

ಪ್ರಮುಖ ಮುಖ್ಯಾಂಶಗಳು

  • ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡಿದವರಿಗೆ ದಂಡದ ಬಿಸಿ
  • ರಸ್ತೆ ಮೇಲೆ ಅಂಗಡಿ ಹಾಕದಂತೆ ನಿರ್ಬಂಧ
  • ನೋ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಕಾರುಗಳ ಚಕ್ರದ ಗಾಳಿಯನ್ನು ತೆಗೆದು ವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು.
ಇಳಕಲ್ಲ : ನಗರದ ಪ್ರಮುಖ ರಸ್ತೆಗಳ ಮೇಲೆ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುತ್ತಿದ್ದ ವಾಹನ ಸವಾರರಿಗೆ ಶಹರ ಪೊಲೀಸ್ ಠಾಣೆ ಪೊಲೀಸರು ಗುರುವಾರ ಬಿಸಿ ಮುಟ್ಟಿಸಿದ್ದಾರೆ.
ಬಸವೇಶ್ವರ ವೃತ್ತದಿಂದ ಕಂಠಿ ವೃತ್ತದ ಪ್ರಮುಖ ರಸ್ತೆಯ ಎಡ ಮತ್ತು ಬಲ ಭಾಗದಲ್ಲಿನ ರಸ್ತೆಯ ಮೇಲೆ ಎಲ್ಲೆಂದರಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡು ನಗರಸಭೆ ವಾಹನದ ಮೂಲಕ ಪೊಲೀಸ್ ಠಾಣೆಗೆ ಕಳುಹಿಸಿ, ಅಲ್ಲಿ ಸಂಬಂಧಿತ ವಾಹನಗಳ ಮಾಲೀಕರಿಗೆ ಪಿಎಸ್‌ಐ ಮಂಜುನಾಥ ಪಾಟೀಲ ದಂಡ ವಿಧಿಸಿ, ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸದಂತೆ ಸವಾರರಿಗೆ ಖಡಕ್ ಸೂಚನೆ ನೀಡಿದರು.
ನೋ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಕಾರುಗಳ ಚಕ್ರದ ಗಾಳಿಯನ್ನು ತೆಗೆದು ವಾಹನ ಸವಾರರಿಗೆ ಬಿಸಿ ಮುಟ್ಟಿಸಿದರು. ರಸ್ತೆಯ ಮೇಲೆ ಇಟ್ಟಿರುವ ತಳ್ಳುವ ಬಂಡಿಗಳನ್ನು ನಗರಸಭೆ ಕಿರಿಯ ಆರೋಗ್ಯ ಅಧಿಕಾರಿ ಶರಣಪ್ಪ ಹಾಗೂ ಸಿಬ್ಬಂದಿ ಎತ್ತಂಗಡಿ ಮಾಡಿ, ರಸ್ತೆಗಳ ಮೇಲೆ ಯಾವುದೇ ರೀತಿಯ ಅಂಗಡಿ ಮುಂಗಟ್ಟುಗಳನ್ನು ಇಡಬಾರದು ಎಂದು ಸ್ಥಳೀಯ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಿದರು.